ನವದೆಹಲಿ: ಗೋವಿನ ಹೆಸರಲ್ಲಿ ನಡೆಯುವ ಹಿಂಸಾಚಾರ ಸಹಿಸಲಾಗದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದರು, ಇದರ ಬೆನ್ನಲ್ಲೇ , ಧರ್ಮದ ಹೆಸರಿನಲ್ಲಿ ನಕಾರಾತ್ಮಕ ವಾತಾವರಣ ಸೃಷ್ಟಿಸಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಕಳವಳ ವ್ಯಕ್ತ ಪಡಿಸಿದ್ದಾರೆ.
ದೆಹಲಿಯಲ್ಲಿ ನಡೆದ ಈದ್ ಮಿಲಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ಸಮಾಜದಲ್ಲಿ ಕೋಮು ಸಾಮರಸ್ಯವನ್ನು ಕಾಪಾಡಿಕೊಳ್ಳುವ ಮೂಲಕ ಒಂದೇ ಕುಟುಂಬದವರಂತೆ ಬದುಕಬೇಕು ಎಂದು ಮನವಿ ಮಾಡಿದ್ದಾರೆ.
ದೇಶದ ವಿವಿಧ ಭಾಗಗಳಲ್ಲಿ ಮುಸ್ಲಿಮರ ಮೇಲೆ ಸರಣಿ ದಾಳಿಗಳು ನಡೆಯುತ್ತಿವೆ, ಭಾರತೀಯರಾದ ನಾವು ಪರಸ್ಪರ ಸಹಕಾರ ಮೂಲಕ ನಡೆಯಬೇಕಾಗಿದೆ. ಭ್ರಾತೃತ್ವ ಭಾವನೆಯನ್ನು ಅಳವಡಿಸಿಕೊಳ್ಳುವ ಮೂಲಕ ಸಂವಿಧಾನದಲ್ಲಿ ಸೂಚಿಸಿರುವ ಮಾರ್ಗದಲ್ಲಿ ಉತ್ತಮವಾದ ವಾತಾವರಣವನ್ನು ನಿರ್ಮಾಣ ಮಾಡಬೇಕು’ ಎಂದು ಕರೆ ನೀಡಿದ್ದಾರೆ.