ಜಿಎಸ್ ಟಿ ಪ್ರಚಾರಕ್ಕಾಗಿ ಬಳಕೆಯಾಗುತ್ತಿರುವುದಕ್ಕೆ ವಿರೋಧವಿದೆ: ಸಿಎಂ ಸಿದ್ದರಾಮಯ್ಯ

ಜಿಎಸ್ ಟಿ ಜಾರಿಗೆ ಕಾಂಗ್ರೆಸ್ ವಿರೋಧಿಸುತ್ತಿಲ್ಲ, ಆದರೆ ಜಿಎಸ್ ಟಿ ವಿರೋಧವನ್ನು ಪ್ರಚಾರಕ್ಕಾಗಿ ಬಳಕೆ ಮಾಡುತ್ತಿರುವುದರ ವಿರುದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 
ಬೆಳಗಾವಿ: ಜಿಎಸ್ ಟಿ ಜಾರಿಗೆ ಕಾಂಗ್ರೆಸ್ ವಿರೋಧಿಸುತ್ತಿಲ್ಲ, ಆದರೆ ಜಿಎಸ್ ಟಿ ವಿರೋಧವನ್ನು ಪ್ರಚಾರಕ್ಕಾಗಿ ಬಳಕೆ ಮಾಡುತ್ತಿರುವುದರ ವಿರುದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 
ಸ್ವಾತಂತ್ರ್ಯ ಬಂದ ನಂತರ ಕೇವಲ 3 ಐತಿಹಾಸಿಕ ಘಟನೆಗಳಲ್ಲಿ ಮಧ್ಯರಾತ್ರಿ ಸಂಸತ್ ನಲ್ಲಿ ಕಾರ್ಯಕ್ರಮ ನಡೆಸಲಾಗಿದೆ. ಸ್ವಾತಂತ್ರ್ಯ ಬಂದಾಗ ಮೊದಲ ಬಾರಿ, ಸ್ವಾತಂತ್ರ್ಯೋತ್ಸವದ 25 ನೇ ವರ್ಷಾಚರಣೆ ಹಾಗೂ 50 ನೇ ವರ್ಷಾಚರಣೆ ವೇಳೆ ಸಂಸತ್ ನಲ್ಲಿ ಮಧ್ಯರಾತ್ರಿ ಕಾರ್ಯಕ್ರಮ ನಡೆಸಲಾಗಿತ್ತು. ಆದರೆ ಈಗ ಜಿಎಸ್ ಟಿ ಜಾರಿಗೆ ಮಧ್ಯರಾತ್ರಿಯಲ್ಲಿ ಕಾರ್ಯಕ್ರಮ ನಡೆಸುತ್ತಿರುವ ಔಚಿತ್ಯವನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದು, ಕಾಂಗ್ರೆಸ್ ಪಕ್ಷ ಜಿಎಸ್ ಟಿ ಯನ್ನು ಜಾರಿಗೊಳಿಸುತ್ತಿರುವುದಕ್ಕೆ ವಿರೋಧಿಸುತ್ತಿಲ್ಲ. ಆದರೆ ಜಿಎಸ್ ಟಿ ಯನ್ನು ಪ್ರಚಾರದ ಸಾಧನವಾಗಿ ಬಳಕೆ ಮಾಡುತ್ತಿರುವುದನ್ನು ವಿರೋಧಿಸುತ್ತಿದೆ ಎಂದು ಹೇಳಿದ್ದಾರೆ. 
ಜಿಎಸ್ ಟಿಯನ್ನು ಮೊದಲು ಪ್ರಸ್ತಾಪಿಸಿದ್ದು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ, ಆದರೆ ಈ ಹಿಂದೆ ನರೇಂದ್ರ ಮೋದಿ ಅವರು ಗುಜರಾತ್ ನ ಮುಖ್ಯಮಂತ್ರಿಯಾಗಿದ್ದಾಗ ಜಿಎಸ್ ಟಿಯನ್ನು ವಿರೋಧಿಸಿದ್ದರು. ಆದರೆ ಈಗ ಅವರ ನೇತೃತ್ವದ ಸರ್ಕಾರವೇ ಮಧ್ಯರಾತ್ರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡು ದೇಶದಲ್ಲಿ ಆರ್ಥಿಕ ಕ್ರಾಂತಿ ತರುತ್ತಿರುವುದು ತಾವೇ ಎಂಬಂತೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com