ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಕಾರ್ಯಾಚರಣೆಗಿಳಿದ ಸೇನಾ ಪಡೆ, ಓರ್ವ ನಾಗರಿಕ ಸಾವು

ಜಮ್ಮು ಮತ್ತು ಕಾಶ್ಮೀರದ ಅನಂತ್'ನಾಗ್ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಯೋಧರು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಕಾಳಗ ನಡೆಯುತ್ತಿರುವುದಾಗಿ ಶನಿವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಅನಂತ್ನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತ್'ನಾಗ್ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಯೋಧರು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಕಾಳಗ ನಡೆಯುತ್ತಿರುವುದಾಗಿ ಶನಿವಾರ ತಿಳಿದುಬಂದಿದೆ. 
ಅನಂತ್ ನಾಗ್ ಜಿಲ್ಲೆಯ ದೈಲ್ಗಾಂ ಗ್ರಾಮದಲ್ಲಿರುವ ಕಟ್ಟವೊಂದರಲ್ಲಿ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ 2-3 ಉಗ್ರರು ಅಡಗಿ ಕುಳಿತಿರುವುದಾಗಿ ತಿಳಿದುಬಂದಿದೆ. 
ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಭಾರತೀಯ ಸೇನೆ ಕಾರ್ಯಾಚರಣೆಯನ್ನು ಆರಂಭಿಸಿದ್ದು, ಸ್ಥಳದಲ್ಲಿ ಯೋಧರು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿರುವುದಾಗಿ ವರದಿಗಳು ತಿಳಿಸಿವೆ. 
ದೈಲ್ಗಾಂನ ಬಿರ್ನ್ಹಿ ಬರ್ಪೊರಾದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಖಚಿತ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಸೇನಾ ಪಡೆ ಕಾರ್ಯಾಚರಣೆಯನ್ನು ಆರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ, ಪರಿಣಾಮ ನಾಗರಿಕರೊಬ್ಬರು ಸಾವನ್ನಪ್ಪಿದ್ದಾರೆಂದು ಮೂಲಗಳು ತಿಳಿಸಿವೆ. 
ಉಗ್ರರು ಮನೆಯೊಳಗೆ ನಾಗರಿಕರನ್ನೂ ಒತ್ತೆಯಾಳುಗಳಾಗಿರಿಸಿಕೊಂಡಿರುವ ಶಂಕೆಗಳು ವ್ಯಕ್ತವಾಗಿದ್ದು, ನಾಗರಿಕರ ಸುರಕ್ಷಿತವಾಗಿ ಹೊರಗೆ ತರಲು ಸೇನಾ ಪಡೆ ಎಲ್ಲಾ ರೀತಿ ಶ್ರಮ ಪಡುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. 
ಉಗ್ರರ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದ್ದು, ಮಹಿಳೆಯನ್ನು ತಹಿರ್ ಬೇಗಂ ಎಂದು ಗುರ್ತಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com