ಮುಂಬಯಿಯಲ್ಲಿ ಧಾರಾಕಾರ ಮಳೆ: ರೈಲು ಸಂಚಾರದಲ್ಲಿ ವ್ಯತ್ಯಯ

ಕಳೆದ ಎರಡು ದಿನಗಳಿಂದ ಮುಂಬಯಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೇಂದ್ರೀಯ. ರೈಲ್ವೆ ಮತ್ತು ಉಪನಗರ ರೈಲು ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಮುಂಬಯಿ:ಕಳೆದ ಎರಡು ದಿನಗಳಿಂದ ಮುಂಬಯಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೇಂದ್ರೀಯ. ರೈಲ್ವೆ ಮತ್ತು ಉಪನಗರ ರೈಲು ಸಂಚಾರದಲ್ಲಿ ವಿಳಂಬವಾಗಿದೆ.
ಕಳೆದ 24 ಗಂಟೆಗಳಿಂದ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜಲಾವೃತಗೊಂಡಿವೆ. ಆದರೆ ಯಾವುದೇ ಪ್ರಾಣಹಾನಿಯಾದ ವರದಿಯಾಗಿಲ್ಲ ಎಂದು ಮುಂಬೈ ಮಹಾನಗರ ಪಾಲಿಕೆ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.
ದಾದರ್ ನ ಸಿಯಾನ್ ಮತ್ತು ಹಿಂದ್ ಮತ್ ಪ್ರದೇಶಗಳು ಜಲಾವೃತಗೊಂಡಿದ್ದು, ಎಲ್ಲಿಯೂ ಟ್ರಾಫಿಕ್ ಸಮಸ್ಯೆ ಉಂಟಾಗಿಲ್ಲ, ಮಳೆಯಿಂದಾಗಿ ಉಪನಗರ ರೈಲು ಸೇವೆಯಲ್ಲಿ ವ್ಯತ್ಯಾಸವಾಗಿದೆ ಎಂದು ಕೇಂದ್ರೀಯ ರೈಲ್ವೆ ಪಿಆರ್ ಓ ಎ.ಕೆ ಸಿಂಗ್ ಹೇಳಿದ್ದಾರೆ. ಕಳೆದ 24 ಗಂಟೆಗಳಿಂದ ಉಪನಗರ ರೈಲು ಸಂಚಾರದಲ್ಲಿ 10 ನಿಮಿಷ ವಿಳಂಬವಾಗುತ್ತಿದೆ ಎಂದು ಹೇಳಿದ್ದಾರೆ. ಕಳೆದ ತಿಂಗಳು ಮುಂಬಯಿಯಲ್ಲಿ ಸರಾಸರಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com