ಸೌಹಾರ್ದತೆಯ ಸಂಕೇತವಾಗಿ ಕಳೆದ ವರ್ಷ ಡಿಸೆಂಬರ್ ತಿಂಗಳಿನಲ್ಲಿ ಪಾಕಿಸ್ತಾನ ತನ್ನ ಜೈಲಿನಲ್ಲಿದ್ದ 217 ಭಾರತೀಯ ಮೀನುಗಾರರನ್ನು ಬಿಡುಗಡೆಗೊಳಿಸಿದ್ದರು. ಇದಲ್ಲದೆ, ಪಾಕಿಸ್ತಾನ ಜೈಲಿನಲ್ಲಿ ಹಲವು ವರ್ಷಗಳಿಂದಲೂ ಸೆರೆವಾಸ ಅನುಭವಿಸುತ್ತಿದ್ದ ಭಾರತೀಯ ಯೋಧ ಬಾಬೂಲಾಲ್ ಚೌಹಾಣ್ ಅವರನ್ನು ಜನವರಿ 21 ರಂದು ವಾಘಾ ಗಡಿ ಮೂಲಕ ಪಾಕಿಸ್ತಾನದ ಅಧಿಕಾರಿಗಳು ಭಾರತಕ್ಕೆ ಕಳುಹಿಸಿಕೊಟ್ಟಿದ್ದರು. ಈ ಹಿನ್ನಲೆಯಲ್ಲಿ ಸೌಹಾರ್ದತೆಯ ಸಂಕೇತವಾಗಿ ಭಾರತ ಇದೀಗ 39 ಕೈದಿಗಳನ್ನು ಬಿಡುಗಡೆ ಮಾಡಿದೆ.