ರಾಜ್ಯದ ಐದು ಜಿಲ್ಲೆಗಳು ಬಯಲು ಶೌಚ ಮುಕ್ತ ಎಂದು ಕೇಂದ್ರ ಘೋಷಣೆ

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಕಾಂಕ್ಷಿಯ ಯೋಜನೆಗಳಲ್ಲಿ ಒಂದಾದ ಬಯಲು ಶೌಚ ಮುಕ್ತಕ್ಕೆ ರಾಜ್ಯಗಳು ಸ್ಪಂದಿಸುತ್ತಿದ್ದು...
ಬಯಲು ಶೌಚ ಮುಕ್ತ
ಬಯಲು ಶೌಚ ಮುಕ್ತ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಕಾಂಕ್ಷಿಯ ಯೋಜನೆಗಳಲ್ಲಿ ಒಂದಾದ ಬಯಲು ಶೌಚ ಮುಕ್ತಕ್ಕೆ ರಾಜ್ಯಗಳು ಸ್ಪಂದಿಸುತ್ತಿದ್ದು ಸದ್ಯ 101 ಜಿಲ್ಲೆಗಳು ಬಯಲು ಶೌಚ ಮುಕ್ತವಾಗಿವೆ ಎಂದು ಕೇಂದ್ರ ಸರ್ಕಾರದ ಕುಡಿಯುವ ನೀರು ಹಾಗೂ ಸ್ವಚ್ಛತಾ ಖಾತೆ ರಾಜ್ಯ ಸಚಿವ ರಮೇಶ್ ಜಿಗಜಿಣಗಿ ಹೇಳಿದ್ದಾರೆ. 
ದೇಶದ 101 ಜಿಲ್ಲೆಗಳು ಬಯಲು ಶೌಚ ಮುಕ್ತವೆಂದು ಕೇಂದ್ರ ಸರ್ಕಾರ ಘೋಷಿಸಿದ್ದು ಇದರಲ್ಲಿ ಕರ್ನಾಟಕ ಐದು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಗಳೂರು, ಉಡುಪಿ ಮತ್ತು ಕೊಡಗು ಜಿಲ್ಲೆಗಳು ಸ್ಥಾನ ಪಡೆದಿವೆ.
ಸದ್ಯ 11 ಕೋಟಿ ಜನರಿಗೆ ಶೌಚಾಲಯಗಳು ಇಲ್ಲದಿದ್ದರಿಂದ ದೇಶಾದ್ಯಂತ 3.5 ಕೋಟಿ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದೆ. ಇನ್ನು ತೆಲಂಗಾಣ, ಕೇರಳ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಈ ಯೋಜನೆ ಪ್ರಗತಿಯಲ್ಲಿದೆ ಎಂದರು. 
ಸ್ವಚ್ಛ ಭಾರತ ಯೋಜನೆ ಅಡಿಯಲ್ಲಿ ಶೇಖಡ 64ರಷ್ಟು ಪ್ರಗತಿಯಾಗಿದೆ. ಭಾರತವನ್ನು ಬಯಲು ಶೌಚ ಮುಕ್ತ ರಾಷ್ಟ್ರ ಎಂದು ಘೋಷಿಸುವ ಉದ್ದೇಶ ಕೇಂದ್ರ ಸರ್ಕಾರಕ್ಕಿದ್ದು, 2019 ಅಕ್ಟೋಬರ್ 2ರೊಳಗೆ ಭಾರತವನ್ನು ಬಯಲು ಶೌಚ ಮುಕ್ತ ರಾಷ್ಟ್ರ ಎಂದು ಘೋಷಿಸಲಾಗುವುದು ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com