ಜಮ್ಮು-ಕಾಶ್ಮೀರ: ಸೇನಾ ಶಿಬಿರದಲ್ಲಿ ಸ್ಫೋಟ- 3 ನಾಗರೀಕರಿಗೆ ಗಾಯ

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಸೇನಾ ಶಿಬಿರದಲ್ಲಿ ಸ್ಫೋಟ ಸಂಭವಿಸಿದ್ದು, ಘಡಟನೆಯಲ್ಲಿ ಮೂವರು ನಾಗರೀಕರಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಸೇನಾ ಶಿಬಿರದಲ್ಲಿ ಸ್ಫೋಟ ಸಂಭವಿಸಿದ್ದು, ಘಡಟನೆಯಲ್ಲಿ ಮೂವರು ನಾಗರೀಕರಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆದಿದೆ. 
ಸೋಪೋರ್'ನ ಪಝಲ್ಪೊರ ಹರ್ದ್'ಶಿವಾ ಗ್ರಾಮದಲ್ಲಿರುವ ಸೇನಾ ಶಿಬಿರದಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮೂವರು ನಾಗರೀಕರು ಗಾಯವಾಗಿಗೊಂಡಿದ್ದಾರೆ. ಗಾಯಗೊಂಡ ಮೂವರ ಪೈಕಿ ಓರ್ವ ಯುವನ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ. 
ಸ್ಫೋಟಕ್ಕೆ ಪ್ರಮುಖ ಕಾರಣಗಳು ಈ ವರೆಗೂ ತಿಳಿದುಬಂದಿಲ್ಲ. ಯಾವುದೇ ಉಗ್ರ ಸಂಘಟನೆಗಳೂ ಈ ವರೆಗೂ ಸ್ಫೋಟದ ಹೊಣೆಯನ್ನು ಹೊತ್ತುಕೊಂಡಿಲ್ಲ ಎಂದು ವರದಿಗಳು ತಿಳಿಸಿವೆ. 
ಇಂದು ಬೆಳಿಗ್ಗೆಯಷ್ಟೇ ಕಾಶ್ಮೀರದ ತ್ರಾಲ್ ಎಂಬ ಪ್ರದೇಶದಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿ, ಇಬ್ಬರು ಉಗ್ರನ್ನು ಹತ್ಯೆ ಮಾಡಿತ್ತು. ಉಗ್ರರು ಹಾಗೂ ಸೇನಾ ಪಡೆ ನಡುವೆ ನಡೆದಿದ್ದ ಗುಂಡಿನ ಚಕಮಕಿ ವೇಳೆ ಓರ್ವ ಪೊಲೀಸ್ ಪೇದೆ ಹುತಾತ್ಮರಾಗಿದ್ದರು. ಅಲ್ಲದೆ, ಓರ್ವ ಸಿಆರ್'ಪಿಎಫ್ ಯೋಧ ಗಂಭೀರವಾಗಿ ಗಾಯಗೊಂಡಿದ್ದರು. ಇದರ ಬೆನ್ನಲ್ಲೇ ಇದೀಗ ಸೇನಾ ಶಿಬಿರದಲ್ಲಿ ಸ್ಫೋಟ ಸಂಭವಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com