ಕೇರಳದಲ್ಲಿ ಮುಂದುವರೆದ ಘರ್ಷಣೆ: ಆರ್'ಎಸ್ಎಸ್, ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ, ನಾಲ್ವರಿಗೆ ಗಾಯ

ದೇವರ ನಾಡು ಎಂದೇ ಖ್ಯಾತಿ ಪಡೆದಿರುವ ಕೇರಳ ರಾಜ್ಯದಲ್ಲಿ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಲೇ ಇದೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಕಮ್ಯುನಿಸ್ಟ್ ಪಕ್ಷಗಳ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಕೋಝಿಕ್ಕೋಡ್; ದೇವರ ನಾಡು ಎಂದೇ ಖ್ಯಾತಿ ಪಡೆದಿರುವ ಕೇರಳ ರಾಜ್ಯದಲ್ಲಿ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಲೇ ಇದೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಕಮ್ಯುನಿಸ್ಟ್ ಪಕ್ಷಗಳ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ಭಾನುವಾರ ನಡೆದಿದೆ. 
ಸಿಪಿಐ(ಎಂ) ಕಾರ್ಯಕರ್ತರು ಹಾಗೂ ಆರ್'ಎಸ್ಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಕೇರಳದ ಕೋಝಿಕ್ಕೋಡ್ ನಲ್ಲಿ ಘರ್ಷಣೆ ಏರ್ಪಟ್ಟಿದ್ದು, ಘರ್ಷಣೆಯಲ್ಲಿ ಮೂವರು ಆರ್'ಎಸ್ಎಸ್ ಕಾರ್ಯಕರ್ತರು ಹಾಗೂ ಓರ್ವ ಬಿಜೆಪಿ ಕಾರ್ಯಕರ್ತನಿಗೆ ಗಂಭೀರವಾದ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. 
ಕೆಲ ದಿನಗಳ ಹಿಂದಷ್ಟೇ ಆರ್'ಎಸ್ಎಸ್ ನಾಯಕರೊಬ್ಬರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ತಲೆ ಕಡಿದವರಿಗೆ ರೂ.1 ಕೋಟಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದರು. ಈ ಹೇಳಿಕೆ ಕೇರಳದಲ್ಲಿ ಸಾಕಷ್ಟು ಪ್ರಕ್ಷುಬ್ಧ ವಾತಾವರಣನ್ನು ನಿರ್ಮಾಣ ಮಾಡಿತ್ತು. ಆರ್'ಎಸ್ಎಸ್ ಕಚೇರಿ ಮೇಲೆ ಬಾಂಬ್ ದಾಳಿ ನಡೆಸಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com