ವಾರಣಾಸಿ ಗಲ್ಲಿಗಳಲ್ಲಿ ಮೋದಿ ರೋಡ್ ಶೋ ಹಾಸ್ಯಾಸ್ಪದ: ಮಲ್ಲಿಕಾರ್ಜುನ್ ಖರ್ಗೆ

ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯ ಗಲ್ಲಿ ಗಲ್ಲಿಗಳಲ್ಲಿ ರೋಡ್ ಶೋ ನಡೆಸುತ್ತಿರುವುದು ಹಾಸ್ಯಾಸ್ಪದ ಎಂದು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ...
ಮಲ್ಲಿಕಾರ್ಜುನ್ ಖರ್ಗೆ
ಮಲ್ಲಿಕಾರ್ಜುನ್ ಖರ್ಗೆ
Updated on: 
ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯ ಗಲ್ಲಿ ಗಲ್ಲಿಗಳಲ್ಲಿ ರೋಡ್ ಶೋ ನಡೆಸುತ್ತಿರುವುದು ಹಾಸ್ಯಾಸ್ಪದ ಎಂದು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 
ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನಿಗಳು ತಾವು ಹೊದಲ್ಲೆಲ್ಲಾ ಮತಗಳು ಸಿಗುತ್ತದೆ ಎಂಬ ಭ್ರಮೆಯಲ್ಲಿದ್ದಾರೆ. ಅಮೆರಿಕದಲ್ಲಿ ಭಾರತೀಯರನ್ನು ಗುರಿಯಾಗಿರಿಸಿಕೊಂಡು ದಾಳಿಗಳು ನಡೆಯುತ್ತಿದೆ. ಈ ಬಗ್ಗೆ ಕೂಡಲೇ ಅಮೆರಿಕ ಅಧ್ಯಕ್ಷರಿಗೆ ಕರೆ ಮಾಡಿ ಮೋದಿ ಅವರು ಮಾತನಾಡಬೇಕಾದ ಅವಶ್ಯಕತೆ ಇದೆ ಎಂದರು. 
ಅಮೆರಿಕದಲ್ಲಿ ಭಾರತೀಯರ ಮೇಲೆ ನಡೆಸುತ್ತಿರುವ ಜನಾಂಗೀಯ ದಾಳಿಗಳು ನಿಲ್ಲದೆ ಹೋದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧಕಕೆ ನಾಂದಿಯಾಗುತ್ತದೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com