ಭಾರತದಲ್ಲಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಶೇ. 58 ರಷ್ಟು ಮಕ್ಕಳಲ್ಲಿ ರಕ್ತ ಹೀನತೆ ಸಮಸ್ಯೆ

ಭಾರತದಲ್ಲಿ 5 ವರ್ಷಕ್ಕಿಂತ ಕಡಿಮೆ ವಯೋಮಾನದ ಮಕ್ಕಳಲ್ಲಿ ಶೇ. 58 ಕ್ಕಿಂತಲೂ ಹೆಚ್ಚಿನವರು ರಕ್ತ ಹೀನತೆಯಿಂದ ಬಳಲುತ್ತಿದ್ದಾರೆ ಎಂಬುದು ವಿಶ್ವ ಆರೋಗ್ಯ ಸಂಸ್ಥೆ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಭಾರತದಲ್ಲಿ 5 ವರ್ಷಕ್ಕಿಂತ ಕಡಿಮೆ ವಯೋಮಾನದ ಮಕ್ಕಳಲ್ಲಿ ಶೇ. 58 ಕ್ಕಿಂತಲೂ ಹೆಚ್ಚಿನವರು ರಕ್ತ ಹೀನತೆಯಿಂದ ಬಳಲುತ್ತಿದ್ದಾರೆ ಎಂಬುದು ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ  ಸಮೀಕ್ಷೆಯಿಂದ ತಿಳಿದು ಬಂದಿದೆ.

ಮಕ್ಕಳ ರಕ್ತದಲ್ಲಿ ಹಿಮೋಗ್ಲೋಬಿನ್ ಅಂಶ ಕಡಿಮೆ ಇದ್ದು, ಅವರು ಸುಲಭವಾಗಿ ಸೋಂಕುಗಳಿಗೆ ತುತ್ತಾಗುವ ಅಪಾಯವನ್ನು ಎದುರಿಸುತ್ತಿದ್ದಾರೆ. ಶೇ. 38 ರಷ್ಟು ಮಕ್ಕಳ ಬೆಳವಣಿಗೆ ಕುಂಠಿತಗೊಂಡಿದ್ದರೆ, ಶೇ. 21 ರಷ್ಟು ಮಕ್ಕಳು ಅಶಕ್ತಿಯಿಂದ ಬಳಲುತ್ತಿದ್ದಾರೆ ಮತ್ತು ಶೇ. 36 ರಷ್ಟು ಮಕ್ಕಳು ಕಡಿಮೆ ತೂಕ ಹೊಂದಿದ್ದಾರೆ ಎಂಬ  ಆಘಾತಕಾರಿ ಮಾಹಿತಿ 2015-16ನೇ ಸಾಲಿನಲ್ಲಿ ನಡೆಸಲಾದ ಸಮೀಕ್ಷೆಯಲ್ಲಿ  ಬಹಿರಂಗ ಗೊಂಡಿದೆ.

2005-06ರ ಸಮೀಕ್ಷೆಗೆ ಹೋಲಿಸಿದರೆ ಕಳೆದ 10 ವರ್ಷಗಳಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿಲ್ಲ. 2011ರ ಜನಗಣತಿಯನ್ನು ಪರಿಗಣನೆಗೆ ತೆಗೆದುಕೊಂಡರೆ ಸುಮಾರು 7.2 ಕೋಟಿ ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದು, 5 ಕೋಟಿ ಮಕ್ಕಳ ಬೆಳವಣಿಗೆ ಕುಂಠಿತವಾಗಿದೆ.

ಜತೆಗೆ 2.6 ಕೋಟಿ ಮಕ್ಕಳು ಅಶಕ್ತರಾಗಿದ್ದು, 4.4 ಕೋಟಿ ಮಕ್ಕಳು ಕಡಿಮೆ ತೂಕ ಹೊಂದಿದ್ದಾರೆ ಎಂದು ದಶಕದ ನಂತರ ಬಿಡುಗಡೆಯಾಗಿರುವ ಸಮೀಕ್ಷೆಯಲ್ಲಿ ತಿಳಿಸಲಾಗಿದೆ. ಭಾರತದಲ್ಲಿ ಅರ್ಧಕ್ಕಿಂತಲೂ ಹೆಚ್ಚಿನ ಗರ್ಭಿಣಿಯರು ರಕ್ತ ಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂಬುದನ್ನು ವರದಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com