ದೆಹಲಿಯಲ್ಲಿ ಹಿಟ್ ಅಂಡ್ ರನ್ ಕೇಸ್: ಮರ್ಸಿಡಸ್ ವೇಗಕ್ಕೆ 17 ವರ್ಷದ ಯುವಕ ಸಾವು

ರಾಜಧಾನಿ ದೆಹಲಿಯಲ್ಲಿ ಗುದ್ದೋಡು ಪ್ರಕರಣವೊಂದು ನಡೆದಿದ್ದು, ವೇಗವಾಗಿ ಬಂದ ಮರ್ಸಿಡಿಸ್'ಗೆ 17 ವರ್ಷದ ಯುವಕನೊಬ್ಬ ಬಲಿಯಾಗಿರುವ ಘಟನೆ ಭಾನುವಾರ ನಡೆದಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಗುದ್ದೋಡು ಪ್ರಕರಣವೊಂದು ನಡೆದಿದ್ದು, ವೇಗವಾಗಿ ಬಂದ ಮರ್ಸಿಡಿಸ್'ಗೆ 17 ವರ್ಷದ ಯುವಕನೊಬ್ಬ ಬಲಿಯಾಗಿರುವ ಘಟನೆ ಭಾನುವಾರ ನಡೆದಿದೆ. 
ಮೃತ ಯುವಕನನ್ನು ಅತುಲ್ ಅರೋರಾ ಎಂದು ಗುರ್ತಿಸಲಾಗಿದೆ. ದೆಹಲಿಯ ಪಶ್ಚಿಮ ವಿಹಾರದಲ್ಲಿ ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ವೇಗವಾಗಿ ಬರುತ್ತಿದ್ದ ಮರ್ಸಿಡಿಸ್ ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವಕನ ಮೇಲೆ ಹರಿದು ಹೋಗಿದೆ. 
ಘಟನೆ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಸ್ಥಳ ಪರಿಶೀಲನೆ ನಡೆಸುತ್ತಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com