ಈಗ ಉಚಿತ ಎಲ್ ಪಿಜಿ ಸಂಪರ್ಕ ಪಡೆಯಲು ಆಧಾರ್ ಕಡ್ಡಾಯ

ಕೇಂದ್ರ ಸರ್ಕಾರ ತನ್ನ ಎಲ್ಲಾ ಸೇವೆಗಳಿಗೂ ಆಧಾರ್ ಕಡ್ಡಾಯಗೊಳಿಸುತ್ತಿದ್ದು, ಇದೀಗ ಬಡ ಮಹಿಳೆಯರು ಪ್ರಧಾನಮಂತ್ರಿ ಉಜ್ವಲ ಯೋಜನೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಕೇಂದ್ರ ಸರ್ಕಾರ ತನ್ನ ಎಲ್ಲಾ ಸೇವೆಗಳಿಗೂ ಆಧಾರ್ ಕಡ್ಡಾಯಗೊಳಿಸುತ್ತಿದ್ದು, ಇದೀಗ ಬಡ ಮಹಿಳೆಯರು ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿ ಉಚಿತ ಅಡಿಗೆ ಅನಿಲ(ಎಲ್ ಪಿಜಿ) ಸಂಪರ್ಕ ಪಡೆಯಯಲು ಆಧಾರ ಕಾರ್ಡ್ ಅನ್ನು ಕಡ್ಡಾಯಗೊಳಿಸಿದೆ.
ಕಳೆದ ವರ್ಷ ಅಕ್ಟೋಬರ್ ಎಲ್ ಪಿಜಿ ಸಬ್ಸಿಡಿ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯ ಮಾಡಿದ್ದ ಸರ್ಕಾರ ಈಗ ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರು ಉಚಿತ ಎಲ್ ಪಿಜಿ ಸಂಪರ್ಕ ಪಡೆಯಲು ಆಧಾರ್ ಕಡ್ಡಾಯ ಮಾಡಿದೆ.
ಕೇಂದ್ರ ಸರ್ಕಾರ ಕಳೆದ ವರ್ಷ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಚಾಲನೆ ನೀಡಿದ್ದು, ಈ ಯೋಜನೆಯಡಿ ಮುಂದಿನ ಮೂರು ವರ್ಷಗಳಲ್ಲಿ ಒಟ್ಟು ಐದು ಕೋಟಿ ಬಡ ಮಹಿಳೆಯರಿಗೆ ಉಚಿತ ಎಲ್ ಪಿಜಿ ಸಂಪರ್ಕ ನೀಡುವ ಗುರಿ ಹೊಂದಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com