ಡಿಜಿಟಲ್ ವಹಿವಾಟುಗಳಿಂದ ಸರ್ಕಾರಕ್ಕೆ ಹೆಚ್ಚಿನ ಉಳಿತಾಯ: ನಿರ್ಮಲಾ ಸೀತಾರಾಮನ್

ಎಲ್ಲಾ ವರ್ಗದವರನ್ನು ಬ್ಯಾಂಕಿಂಗ್ ವ್ಯವಸ್ಥೆಯಡಿ ತರುವ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಅನಧಿಕೃತ ಆರ್ಥಿಕತೆಯನ್ನು ನಿರ್ಮೂಲನೆ ಮಾಡುವಲ್ಲಿ ಪರಿಣಾಮಕಾರಿಯಾಗಿದೆ...
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
ಪಾಂಡಿಚೆರಿ: ಎಲ್ಲಾ ವರ್ಗದವರನ್ನು ಬ್ಯಾಂಕಿಂಗ್ ವ್ಯವಸ್ಥೆಯಡಿ ತರುವ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಅನಧಿಕೃತ ಆರ್ಥಿಕತೆಯನ್ನು ನಿರ್ಮೂಲನೆ ಮಾಡುವಲ್ಲಿ ಪರಿಣಾಮಕಾರಿಯಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ಹಿಂದುಳಿದ, ಬಡ ವರ್ಗಗಳನ್ನೂ ಗುರುತಿಸುವಂತಾಗಿದ್ದು, ಎಲ್ಲಾ ವರ್ಗಗಳ ಅಭಿವೃದ್ಧಿಗೂ ಪೂರಕವಾಗಿದೆ ಎಂದು ಡಿಜಿ ಧನ್ ಯೋಜನಾ ಸೆಮಿನಾರ್ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇನ್ನು ಕೇಂದ್ರ ಸರ್ಕಾರ ಸಬ್ಸಿಡಿ ಹಣವನ್ನು ನೇರವರ್ಗಾವಣೆ ಮಾಡುವ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸಿರುವುದರ ಬಗ್ಗೆಯೂ ಮಾತನಾಡಿರುವ ನಿರ್ಮಲಾ ಸೀತಾರಾಮನ್ ಫಲಾನುಭವಿಗಳಿಗೆ ನೇರ ವರ್ಗಾವಣೆ ಮಾಡುವ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸಿರುವುದರಿಂದ ಸರ್ಕಾರಕ್ಕೆ ಹೆಚ್ಚಿನ ಉಳಿತಾಯ ಸಾಧ್ಯವಾಗಿದೆ ಎಂದಿದ್ದಾರೆ. 
ಕೇಂದ್ರ ಸರ್ಕಾರದ ಮನ್ರೇಗಾ ಯೋಜನೆಗಳಂತಹ ಫಲಾನುಭವಿಗಳಿಗೆ ಡಿಬಿಟಿ ವ್ಯವಸ್ಥೆಯಿಂದ ನೇರ ಪಾವತಿ ಮಾಡುವುದರಿಂದ ಕೇಂದ್ರ ಸರ್ಕಾರ 27,000 ಕೋಟಿ ಉಳಿಸಲು ಸಾಧ್ಯವಾಗಿದೆ ಎಂದು ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com