ಆಫ್ಘಾನಿಸ್ತಾನ: ಸೇನಾ ಆಸ್ಪತ್ರೆ ಮೇಲೆ ಉಗ್ರರ ದಾಳಿ

ಆಫ್ಘಾನಿಸ್ತಾನದ ಕಾಬೂಲ್ ನಲ್ಲಿರುವ ಸೇನಾ ಆಸ್ಪತ್ರೆ ಮೇಲೆ ಉಗ್ರರು ದಾಳಿ ನಡೆಸಿದ್ದು, ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಸುತ್ತಿರುವುದಾಗಿ ಬುಧವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಕಾಬುಲ್: ಆಫ್ಘಾನಿಸ್ತಾನದ ಕಾಬೂಲ್ ನಲ್ಲಿರುವ ಸೇನಾ ಆಸ್ಪತ್ರೆ ಮೇಲೆ ಉಗ್ರರು ದಾಳಿ ನಡೆಸಿದ್ದು, ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಸುತ್ತಿರುವುದಾಗಿ ಬುಧವಾರ ತಿಳಿದುಬಂದಿದೆ. 
ಇಂದು ಬೆಳಿಗ್ಗೆ 5 ಜನರಿದ್ದ ಉಗ್ರ ಗುಂಪೊಂದು ಏಕಾಏಕಿ ಸೇನಾ ಆಸ್ಪತ್ರೆಯೊಳಗೆ ನುಗ್ಗಿದ್ದಾರೆ. ಈ ವೇಳೆ ಆಸ್ಪತ್ರೆಯ ಮುಖ್ಯದ್ವಾರದ ಬಳಿ ಬಾಂಬ್ ವೊಂದನ್ನು ಸ್ಫೋಟಿಸಿ ಆಸ್ಪತ್ರೆಯ ಒಳನುಗ್ಗಿದ್ದಾರೆ. ಘಟನೆಯಲ್ಲಿ ಸಾವು-ನೋವುಗಳ ಸಂಭವಿಸಿರುವುದಾಗಿ ವರದಿಗಳಾಗಿಲ್ಲ. ಆದರೆ, ಆಸ್ಪತ್ರೆ ಒಳ ನುಗ್ಗಿರುವ ಉಗ್ರರು ರೋಗಿಗಳು, ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳನ್ನು ಒತ್ತೆಯಾಳಾಗಿರಿಸಿಕೊಂಡಿದ್ದಾರೆಂದು ವರದಿಗಳು ತಿಳಿಸಿವೆ. 
ದಾಳಿ ನಂತರ ಆಸ್ಪತ್ರೆ ಒಳಗಿರುವ ಕೆಲ ಸಿಬ್ಬಂದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಗಳನ್ನು ಹಾಕಿದ್ದು, ದಾಳಿಕೋರರು ಆಸ್ಪತ್ರೆಯ ಒಳಗಿದ್ದಾರೆ. ನಮ್ಮ ಕ್ಷೇಮಕ್ಕಾಗಿ ಪ್ರಾರ್ಥಿಸಿ ಎಂದು ಹೇಳಿಕೊಂಡಿದ್ದಾರೆ. 
ದಾಳಿ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ಸೇನಾಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ. ಪ್ರಸ್ತುತ ಸ್ಥಳದಲ್ಲಿ ಉಗ್ರರು ಹಾಗೂ ಯೋಧರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com