'ಪಾಕಿಸ್ತಾನ ಭಯೋತ್ಪಾದಕ ದೇಶ' ಮಸೂದೆ ಹಿಂಪಡೆದ ರಾಜೀವ್ ಚಂದ್ರಶೇಖರ್

ಪಾಕಿಸ್ತಾನವನ್ನು ‘ಭಯೋತ್ಪಾದನೆ ಪ್ರಾಯೋಜಿತ ರಾಷ್ಟ್ರವೆಂದು ಘೋಷಣೆ ಮಾಡಬೇಕು ಎಂದು ರಾಜ್ಯಸಭಾ ಸದಸ್ಯ ಹಾಗೂ....
ರಾಜೀವ್ ಚಂದ್ರಶೇಖರ್
ರಾಜೀವ್ ಚಂದ್ರಶೇಖರ್
ನವದೆಹಲಿ: ಪಾಕಿಸ್ತಾನವನ್ನು ‘ಭಯೋತ್ಪಾದನೆ ಪ್ರಾಯೋಜಿತ ರಾಷ್ಟ್ರವೆಂದು ಘೋಷಣೆ ಮಾಡಬೇಕು ಎಂದು ರಾಜ್ಯಸಭಾ ಸದಸ್ಯ ಹಾಗೂ ಎನ್ ಡಿಎ ಕೇರಳದ ಉಪಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರು ತಾವು ಮಂಡಿಸಿದ್ದ ಖಾಸಗಿ ಮಸೂದೆಯನ್ನು ಶುಕ್ರವಾರ ವಾಪಸ್ ಪಡೆದಿದ್ದಾರೆ.
ರಾಜೀವ್ ಚಂದ್ರಶೇಖರ್ ಅವರು ಪಾಕಿಸ್ತಾನವನ್ನು ಭಯೋತ್ಪಾದನೆ ಪ್ರಾಯೋಜಿತ ರಾಷ್ಟ್ರ ಎಂದು ಅಧಿಕೃತವಾಗಿ ಘೋಷಿಸುವ ಖಾಸಗಿ ಮಸೂದೆ (The Declaration of Countries as Sponsor of Terrorism Bill, 2016) ಯನ್ನು ಕಳೆದ ಫೆ.3ರಂದು ಮಂಡಿಸಿ ಕೇಂದ್ರ ಸರ್ಕಾರ ಅದನ್ನು ಪುರಸ್ಕರಿಸಬೇಕೆಂದು ಆಗ್ರಹಿಸಿದ್ದರು. ಆದರೆ ರಾಜೀವ್ ಚಂದ್ರಶೇಖರ್ ಅವರ ಮಸೂದೆಯನ್ನು ಅಂಗೀಕರಿಸಲು ಕೇಂದ್ರ ಸರ್ಕಾರ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಮಸೂದೆ ಹಿಂಪಡೆದಿದ್ದಾರೆ.
ಪದೇ ಪದೇ ಭಾರತದ ಮೇಲೆ ದಾಳಿ ನಡೆಸುತ್ತಿರುವ ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎಂದು ಅಧಿಕೃತವಾಗಿ ಘೋಷಿಸಿ ಅದರೊಂದಿಗಿನ ಎಲ್ಲಾ ರೀತಿಯ ಅಂತಾರಾಷ್ಟ್ರೀಯ ಸಂಬಂಧಗಳನ್ನು ಕಡಿದುಕೊಳ್ಳಬೇಕು. ಆ ಮೂಲಕ ಪಾಕಿಸ್ತಾನವನ್ನು ಅಂತಾರಾಷ್ಟ್ರೀಯ ಸಮುದಾಯದಲ್ಲಿ ಒಂಟಿಯಾಗಿಸಬೇಕೆಂದು ರಾಜೀವ್ ಚಂದ್ರಶೇಖರ್ ಖಾಸಗಿ ಮಸೂದೆ ಮಂಡನೆ ವೇಳೆ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com