ಅಖಿಲೇಶ್ ಯಾದವ್,
ದೇಶ
ರಾಜ್ಯಪಾಲ ರಾಮ್ ನಾಯಕ್ ಭೇಟಿ ಮಾಡಿ ರಾಜಿನಾಮೆ ಸಲ್ಲಿಸಿದ ಅಖಿಲೇಶ್ ಯಾದವ್
ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಹೀನಾಯ ಸೋಲು ಅನುಭವಿಸಿದ ಹಿನ್ನಲೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ...
ಲಖನೌ: ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಹೀನಾಯ ಸೋಲು ಅನುಭವಿಸಿದ ಹಿನ್ನಲೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಶನಿವಾರ ರಾಜ್ಯಪಾಲ ರಾಮ್ ನಾಯಕ್ ಅವರನ್ನು ಭೇಟಿ ಮಾಡಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ.
ಅಖಿಲೇಶ್ ಯಾದವ್ ಅವರು ಇಂದು ಸಂಜೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ರಾಜಿನಾಮೆ ಸಲ್ಲಿಸಿದ್ದು, ನೂತನ ಸರ್ಕಾರ ರಚನೆಯಾಗುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ರಾಮ್ ನಾಯಕ್ ಅವರು ಸೂಚಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚಿಗೆ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಉತ್ತರ ಪ್ರದೇಶ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಪಡೆದಿದೆ.

