ಲಖನೌ: ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ ಹಿನ್ನಲೆಯಲ್ಲಿ ಗೋವಾ ಮುಖ್ಯಮಂತ್ರಿ ಲಕ್ಷ್ಮಿಕಾಂತ್ ಪರ್ಸೇಕರ್ ಅವರು ಶನಿವಾರ ರಾಜ್ಯಪಾಲ ಮೃದಲಾ ಸಿನ್ಹಾ ಅವರನ್ನು ಭೇಟಿ ಮಾಡಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ.
ಪರ್ಸೇಕರ್ ಅವರ ರಾಜಿನಾಮೆಯನ್ನು ಮೃದಲಾ ಸಿನ್ಹಾ ಅವರು ಅಂಗೀಕರಿಸಿದ್ದು, ನೂತನ ಸರ್ಕಾರ ರಚನೆಯಾಗುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ಪರ್ಸೇಕರ್ ಅವರಿಗೆ ಸೂಚಿಸಿದ್ದಾರೆ.
ಗೋವಾ ಸೇರಿದಂತೆ ಇತ್ತೀಚಿಗೆ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಗೋವಾದಲ್ಲಿ ಯಾವುದೇ ಪಕ್ಷ ಸ್ಪಷ್ಟ ಬಹುಮತ ಪಡೆಯದೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.
ಒಟ್ಟು 40 ಸದಸ್ಯ ಬಲ ಹೊಂದಿರುವ ಗೋವಾ ವಿಧಾನಸಭೆಯಲ್ಲಿ ಆಡಳಿತರೂಢ ಬಿಜೆಪಿ 13 ಸ್ಥಾನ, ಕಾಂಗ್ರೆಸ್ 17 ಸ್ಥಾನಗಳಲ್ಲಿ ಎಂಜಿಪಿ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ ಇತರರು 7 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಸರ್ಕಾರ ರಚನೆಗೆ 21 ಸದಸ್ಯರ ಅಗತ್ಯವಿದೆ.