ಕಾಶ್ಮೀರ ವಿವಾದ: ವಿಶ್ವಸಂಸ್ಥೆ ಮಧ್ಯಸ್ಥಿಕೆಗೆ ಭಾರತ ತಿರಸ್ಕಾರ

ಹಲವು ವರ್ಷಗಳಿಂದಲೂ ಭಾರತ ಮತ್ತು ಪಾಕಿಸ್ತಾನದ ನಡುವೆ ಕಗ್ಗಂಟಾಗಿ ಉಳಿದಿರುವ ಕಾಶ್ಮೀರ ಸಮಸ್ಯೆ ಇತ್ಯರ್ಥಕ್ಕೆ ಮಧ್ಯಸ್ಥಿಕೆ ವಹಿಸುವ ವಿಶ್ವಸಂಸ್ಥೆಯ ನೂತನ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟ್ರೆಸ್ ಅವರ ಪ್ರಸ್ತಾವವನ್ನು ಭಾರತ ಶನಿವಾರ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ನವದೆಹಲಿ: ಹಲವು ವರ್ಷಗಳಿಂದಲೂ ಭಾರತ ಮತ್ತು ಪಾಕಿಸ್ತಾನದ ನಡುವೆ ಕಗ್ಗಂಟಾಗಿ ಉಳಿದಿರುವ ಕಾಶ್ಮೀರ ಸಮಸ್ಯೆ ಇತ್ಯರ್ಥಕ್ಕೆ ಮಧ್ಯಸ್ಥಿಕೆ ವಹಿಸುವ ವಿಶ್ವಸಂಸ್ಥೆಯ ನೂತನ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟ್ರೆಸ್ ಅವರ ಪ್ರಸ್ತಾವವನ್ನು ಭಾರತ ಶನಿವಾರ ತಿರಸ್ಕರಿಸಿದೆ. 
ಕಾಶ್ಮೀರ ವಿವಾದ ಸಂಬಂಧ ಭಾರತ ಹಾಗೂ ಪಾಕಿಸ್ತಾನದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವ ಸಾಧ್ಯತೆ ಕುರಿತು ಗುಟ್ರೆಸ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಭಾರತ, ಭಾರತ ಮತ್ತು ಪಾಕಿಸ್ತಾನ ನಡುವಿನ ಎಲ್ಲಾ ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಳ್ಳಲು ದ್ವಿಪಕ್ಷೀಯ ಮಾತುಕತೆಯಿಂದಷ್ಟೇ ಸಾಧ್ಯ ಎಂಬ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದೆ. 
ಈ ಹಿಂದೆ ಗುಟ್ರೆಸ್ ಅವರ ವಕ್ತಾರ ಫರ್ಹಾನ್ ಹಕ್ ಅವರು, ಪ್ರಧಾನ ಕಾರ್ಯದರ್ಶಿಗಳು ಉಭಯ ದೇಶಗಳ ನಡುವಿನ ಚರ್ಚಾ ಪ್ರಕ್ರಿಯೆಯನ್ನುಮುಂದುವರೆಸಲು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ. ಈ ಬಗ್ಗೆ ಅವರು ಪರಿಶೀಲಿಸುತ್ತಿದ್ದು, ಈ ಬಗ್ಗೆ ಇದಕ್ಕಿಂತ ಹೆಚ್ಚು ಎನನ್ನೂ ಹೇಳಲು ಸಾಧ್ಯವಿಲ್ಲ. ಕಾಶ್ಮೀರದಲ್ಲಿ ಪರಿಸ್ಥಿತಿ ಸುಧಾರಿಸಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ವಿಶ್ವಸಂಸ್ಥೆ ಕೈಗೊಳ್ಳಲಿಡೆ ಎಂದು ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com