ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ 2 ಟಿಎಂಸಿ ನೀರು

ಮಹಾರಾಷ್ಟ್ರ ಸರ್ಕಾರ ಕೋಯ್ನಾ ಜಲಾಶದಿಂದ ಕೃಷ್ಣ ನದಿಗೆ 2 ಟಿಎಂಸಿ ಅಡಿ ನೀರು ಬಿಡುವ ಭರವಸೆ ನೀಡಿದೆ.
ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ 2 ಟಿಎಂಸಿ ನೀರು
ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ 2 ಟಿಎಂಸಿ ನೀರು
ಬೆಳಗಾವಿ: ಮಹಾರಾಷ್ಟ್ರ ಸರ್ಕಾರ ಕೋಯ್ನಾ ಜಲಾಶದಿಂದ ಕೃಷ್ಣ ನದಿಗೆ 2 ಟಿಎಂಸಿ ಅಡಿ ನೀರು ಬಿಡುವ ಭರವಸೆ ನೀಡಿದೆ. 

ರಾಜ್ಯ ಸಂಸದರಾದ ಪ್ರಭಾಕರ್ ಕೋರೆ, ಪ್ರಹ್ಲಾದ್ ಜೋಷಿ, ಶಾಸಕ ಲಕ್ಷ್ಮಣ್ ಸವದಿ, ದುರ್ಯೋಧನ ಐಹೊಳೆ, ಶಶಿಕಲಾ ಜೊಲ್ಲೆ, ರಾಜು ಕಾಗೆ, ಸಂಸದ ಪಿಸಿ ಗದ್ದಿಗೌಡರ್, ಅಣ್ಣಾಸಾಹೇಬ್ ಜೊಲ್ಲೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾತುಕತೆ ನಡೆಸಿದ್ದು, ಉತ್ತರ ಕರ್ನಾಟಕದಲ್ಲಿ ಎದುರಾಗಿರುವ ನೀರಿನ ಸಮಸ್ಯೆಯನ್ನು ವಿವರಿಸಿ, ನೀರು ಬಿಡುವಂತೆ ಮನವಿ ಮಾಡಿದ್ದಾರೆ. ಬಿಜೆಪಿ ಸಂಸದರು, ಶಾಸಕರ ಮನವಿಗೆ ಸ್ಪಂದಿಸಿರುವ ದೇವೇಂದ್ರ ಫಡ್ನವೀಸ್ ನೀರು ಬಿಡುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. 
ಕಳೆದ ತಿಂಗಳು ರಾಜ್ಯ ಸರ್ಕಾರ ಅಧಿಕೃತವಾಗಿ ಮಹಾರಾಷ್ಟ್ರ ಸರ್ಕಾರಕ್ಕೆ 2 ಟಿಎಂಸಿ ನೀರು ಬಿಡುವಂತೆ ಮನವಿ ಮಾಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com