ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸುತ್ತೇನೆ: ಪ್ರಕಾಶ್ ಸಿಂಗ್ ಬಾದಲ್

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಅಕಾಲಿದಳ ಮೈತ್ರಿಕೂಟಕ್ಕೆ ಭಾರಿ ಮುಖಭಂಗವಾಗಿರುವುದರಿಂದ ಭಾನುವಾರ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸುವುದಾಗಿ ಹೇಳಿಕೆ ನೀಡಿದ್ದಾರೆ.
ಸಿಎಂ ಪ್ರಕಾಶ್ ಸಿಂಗ್ ಬಾದಲ್
ಸಿಎಂ ಪ್ರಕಾಶ್ ಸಿಂಗ್ ಬಾದಲ್

ಚಂಡೀಘಡ್: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಅಕಾಲಿದಳ ಮೈತ್ರಿಕೂಟಕ್ಕೆ ಭಾರಿ ಮುಖಭಂಗವಾಗಿರುವುದರಿಂದ ಭಾನುವಾರ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸುವುದಾಗಿ ಹೇಳಿಕೆ ನೀಡಿದ್ದಾರೆ.

ಪಂಜಾಬ್ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಪ್ರಕಾಶ್ ಸಿಂಗ್ ಬಾದಲ್ ಅವರು, ಮತದಾರರ ತೀರ್ಪನ್ನು ಸ್ವಾಗತಿಸುತ್ತೇನೆ. ನಾಳೆಯೇ ತಮ್ಮ ಸಿಎಂ ಸ್ಥಾನಕ್ಕೆ  ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.

"ಈ ಫಲಿತಾಂಶ ನಿಜಕ್ಕೂ ಆಘಾತ ತಂದಿದೆ. ಇಂತಹ ಫಲಿತಾಂಶವನ್ನು ನಾವು ನಿರೀಕ್ಷಿಸರಲಿಲ್ಲ. ಆದರೂ ಮತದಾರರ ತೀರ್ಪನ್ನು ಗೌರವಿಸಬೇಕು. ಹೀಗಾಗಿ ನಾಳೆಯೇ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ. ಅಂತೆಯೇ  ಕೋರ್ ಕಮಿಟಿ ಸಭೆ ಕರೆದು ಸಭೆಯಲ್ಲಿ ಚುನಾವಣಾ ಸೋಲಿನ ಕುರಿತಂತೆ ಪರಾಮರ್ಶೆ ನಡೆಸುತ್ತೇವೆ. ಸೋಲಿಗೆ ಕಾರಣವಾದ ಅಂಶಗಳನ್ನು ಪತ್ತೆ ಹಚ್ಚಲಾಗುತ್ತದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com