ಜನರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ: ಶಿವಪಾಲ್ ಯಾದವ್

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಗಿದ ನಂತರ ಜನರು ನೀಡಿದ...
ಶಿವಪಾಲ್ ಯಾದವ್
ಶಿವಪಾಲ್ ಯಾದವ್
ಏತವಃ(ಉತ್ತರ ಪ್ರದೇಶ): ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಗಿದ ನಂತರ ಜನರು ನೀಡಿದ ತೀರ್ಮಾನವನ್ನು ಸ್ವೀಕರಿಸುವುದಾಗಿ ಸಮಾಜವಾದಿ ಪಕ್ಷದ ನಾಯಕ ಶಿವಪಾಲ್ ಯಾದವ್ ಪ್ರತಿಕ್ರಿಯಿಸಿದ್ದಾರೆ.
ಎಲ್ಲರೂ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಜನರ ತೀರ್ಮಾನವನ್ನು ಸ್ವೀಕರಿಸಿದರೂ ಕೂಡ ನಾವು ಚುನಾವಣಾ ಫಲಿತಾಂಶದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ್ ಮತ್ತು ಮಣಿಪುರಗಳಲ್ಲಿ ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭಗೊಂಡಿದೆ.
ಮತ ಎಣಿಕೆ ನಡೆಯುವ ಎಲ್ಲಾ ಕೇಂದ್ರಗಳಲ್ಲಿ ಚುನಾವಣಾ ಆಯೋಗ ಭದ್ರತಾ ವ್ಯವಸ್ಥೆ ಕಲ್ಪಿಸಿದೆ. ಉತ್ತರ ಪ್ರದೇಶದ 75 ಜಿಲ್ಲೆಗಳ 78 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. ಮುಖ್ಯ ಚುನಾವಣಾಧಿಕಾರಿ ಟಿ. ವೆಂಕಟೇಶ್ ವಿಡಿಯೊ ಕಾನ್ಫರೆನ್ಸ್ ಮೂಲಕ ತಯಾರಿಯನ್ನು ಪರಿಶೀಲಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com