ಜಮ್ಮು: ಪಾಕಿಸ್ತಾನ ಸೇನೆ ಮತ್ತೆ ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದೆ.
ಜಮ್ಮು-ಕಾಶ್ಮೀರದ ಪೂಂಚ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘನೆ ನಡೆದಿದ್ದು, ಭಾರತದ ಕೃಷ್ಣ ಘಟಿ ಸೆಕ್ಟರ್ ನ್ನು ಗುರಿಯಾಗಿರಿಸಿಕೊಂಡು 82 ಎಂಎಂ ಮಾರ್ಟರ್ ಶೆಲ್ ಗಳ ಮೂಲಕ ದಾಳಿ ನಡೆಸಲಾಗಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮನೀಷ್ ಮೆಹ್ತಾ ಮಾಹಿತಿ ನೀಡಿದ್ದಾರೆ.
ಮಧ್ಯರಾತ್ರಿ 12 ಗಂಟೆಯ ವೇಳೆಗೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಭಾರತೀಯ ಸೇನೆಯ ವಕ್ತಾರರು ಹೇಳಿದ್ದಾರೆ.