ನವದೆಹಲಿ: ಛತ್ತೀಸ್ಗಡದ ಸುಕ್ಮಾದ ಬೇಜಾ ಬಳಿ ಸಿಆರ್'ಪಿಎಫ್ ಯೋಧರ ಮೇಲೆ ನಕ್ಸಲರು ನಡೆಸಿದ ದಾಳಿಯಲ್ಲಿ 12 ಯೋಧರು ಹುತಾತ್ಮರಾಗಿದ್ದು, ಮಾ.12 ರಂದು ಹೋಳಿ ಹಬ್ಬ ಆಚರಿಸದಿರಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನಿರ್ಧರಿಸಿದ್ದಾರೆ.
ಸುಕ್ಮಾ ದಾಳಿಯಲ್ಲಿ ಯೋಧರು ಹುತಾತ್ಮರಾಗಿರುವ ಹಿನ್ನೆಲೆಯಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವುದಕ್ಕಾಗಿ ರಾಜನಾಥ್ ಸಿಂಗ್ ಅವರು ಹೋಳಿ ಹಬ್ಬವನ್ನು ಆಚರಣೆ ಮಾಡದಿರಲು ನಿರ್ಧರಿಸಿದ್ದಾರೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಛತ್ತೀಸ್ಗಡದ ಸುಕ್ಮಾದ ಬೇಜಾ ಬಳಿ ಸಿಆರ್'ಪಿಎಫ್ ಯೋಧರ ಮೇಲೆ ನಕ್ಸಲರು ಮಾ.11 ರಂದು ಬೆಳಿಗ್ಗೆ ಗುಂಡಿನ ದಾಳಿ ನಡೆಸಿದ್ದರು. ದಾಳಿಯಲ್ಲಿ 12 ಯೋಧರು ಹುತಾತ್ಮರಾಗಿದ್ದಾರೆ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯೋಧರ ಆರೋಗ್ಯ ವಿಚಾರಿಸಿದ್ದಾರೆ.