ಉತ್ತರಾಖಂಡ್, ಉತ್ತರ ಪ್ರದೇಶ ಸಿಎಂಗಳ ಆಯ್ಕೆ ಬಗ್ಗೆ ಬಿಜೆಪಿ ನಾಯಕರ ಚರ್ಚೆ

ಉತ್ತರ ಪ್ರದೇಶ, ಉತ್ತರಾಖಂಡ್ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಬಹುಮತ ಗಳಿಸಿದ್ದು, ಮುಖ್ಯಮಂತ್ರಿಗಳ ಆಯ್ಕೆ ಬಗ್ಗೆ ಬಿಜೆಪಿ ವರಿಷ್ಠ ನಾಯಕರು ಚರ್ಚೆ ನಡೆಸಲಿದ್ದಾರೆ.
ಉತ್ತರಾಖಂಡ್, ಉತ್ತರ ಪ್ರದೇಶ ಸಿಎಂಗಳ ಆಯ್ಕೆ ಬಗ್ಗೆ ಬಿಜೆಪಿ ನಾಯಕರ ಚರ್ಚೆ
ಉತ್ತರಾಖಂಡ್, ಉತ್ತರ ಪ್ರದೇಶ ಸಿಎಂಗಳ ಆಯ್ಕೆ ಬಗ್ಗೆ ಬಿಜೆಪಿ ನಾಯಕರ ಚರ್ಚೆ
ನವದೆಹಲಿ: ಉತ್ತರ ಪ್ರದೇಶ, ಉತ್ತರಾಖಂಡ್ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಬಹುಮತ ಗಳಿಸಿದ್ದು, ಮುಖ್ಯಮಂತ್ರಿಗಳ ಆಯ್ಕೆ ಬಗ್ಗೆ ಬಿಜೆಪಿ ವರಿಷ್ಠ ನಾಯಕರು ಚರ್ಚೆ ನಡೆಸಲಿದ್ದಾರೆ. 
ಸಂಸದೀಯ ಮಂಡಳಿ ಸಭೆಯಲ್ಲಿ ಸಿಎಂ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಚರ್ಚೆ ನಡೆಯಲಿದ್ದು, ಗೋವಾ, ಮಣಿಪುರಗಳಲ್ಲಿ ಸರ್ಕಾರ ರಚನೆಯ ಕಾರ್ಯತಂತ್ರದ ಬಗ್ಗೆಯೂ ಸಂಸದೀಯ ಮಂಡಳಿ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಸಹ ಸಂಸದೀಯ ಮಂಡಳಿ ಸಭೆಯಲ್ಲಿ ಭಾಗವಹಿಸಲಿದ್ದು, ಅಮಿತ್ ಶಾ, ಸಚಿವರಾದ ಅರುಣ್ ಜೇಟ್ಲಿ, ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಸಹ ಇರಲಿದ್ದಾರೆ. 
ಗೃಹ ಸಚಿವ ರಾಜನಾಥ್ ಸಿಂಗ್, ಸಂಸದ ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಕೇಶವ ಪ್ರಸಾದ್ ಮೌರ್ಯ, ಕೇಂದ್ರ ಸಚಿವರಾದ ಮನೋಜ್ ಸಿನ್ಹಾ, ಸಂತೋಶ್ ಗಂಗ್ವಾರ್ ಸೇರಿದಂತೆ ಹಲವರ ಹೆಸರು ಉತ್ತರ ಪ್ರದೇಶ ಸಿಎಂ ರೇಸ್ ನಲ್ಲಿ ಕೇಳಿಬರುತ್ತಿದೆ. ಉತ್ತರಾಖಂಡ್ ನಲ್ಲಿ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ತ್ರಿವೇಂದ್ರ ಸಿಂಗ್ ರಾವತ್, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಸತ್ಪಾಲ್ ಮಹಾರಾಜ್ ಹಾಗೂ ಪ್ರಕಾಶ್ ಪಂತ್ ಹೆಸರು ಕೇಳಿಬರುತ್ತಿದೆ. ಒಟ್ಟಾರೆ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಉತ್ತರ ಪ್ರದೇಶ, ಉತ್ತರಾಖಂಡ್ ಗೆ ಸಿಎಂ ಯಾರಾಗಲಿದ್ದಾರೆ ಎಂಬುದು ತೀರ್ಮಾನವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com