ಚುನಾವಣೆಗೂ ಮುನ್ನ ಬಿಜೆಪಿಯೊಂದಿಗಿನ ಮೈತ್ರಿಯನ್ನು ತೊರೆದಿದ್ದ ಎಂಜಿಪಿ, ನಂತರ ಜಿಎಸ್ ಎಂ ನೊಂದಿಗೆ ಮೈತ್ರಿಗೆ ಮುಂದಾಗಿತ್ತು. ಆದರೆ ಈಗ ಮನೋಹರ್ ಪರಿಕ್ಕರ್ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಬೆಂಬಲ ಘೋಷಿಸಿದೆ ಈ ಹಿನ್ನೆಲೆಯಲ್ಲಿ ಜಿಎಸ್ಎಂ ಅಸಮಾಧಾನ ವ್ಯಕ್ತಪಡಿಸಿದ್ದು ಚುನಾವಣಾ ಪೂರ್ವ ಮೈತ್ರಿಗೆ ಎಂಜಿಪಿ ಅವಮಾನ ಮಾಡಿದೆ ಎಂದು ಆರೋಪಿಸಿದೆ.