ಕಾಶ್ಮೀರ ಪ್ರತ್ಯೇಕತಾವಾದಿ ನಾಯಕರ ಬಂಧನ

ಕಣಿವೆ ರಾಜ್ಯದಲ್ಲಿ ಕೈದಿಗಳ ದುರವಸ್ಥೆಯ ವಿರುದ್ಧ ಧರಣಿ ನಡೆಸಲು ಕರೆ ನೀಡಿದ್ದ ಕಾಶ್ಮೀರ ಪ್ರತ್ಯೇಕತಾವಾದಿ ಮುಖಂಡರನ್ನು ಜಮ್ಮು-ಕಾಶ್ಮೀರ ಅಧಿಕಾರಿಗಳು ಬಂಧಿಸಿದ್ದಾರೆ.
ಮುಹಮ್ಮದ್ ಯಾಸೀನ್ ಮಲೀಕ್
ಮುಹಮ್ಮದ್ ಯಾಸೀನ್ ಮಲೀಕ್
ಶ್ರೀನಗರ: ಕಣಿವೆ ರಾಜ್ಯದಲ್ಲಿ ಕೈದಿಗಳ ದುರವಸ್ಥೆಯ ವಿರುದ್ಧ ಧರಣಿ ನಡೆಸಲು ಕರೆ ನೀಡಿದ್ದ ಕಾಶ್ಮೀರ ಪ್ರತ್ಯೇಕತಾವಾದಿ ಮುಖಂಡರನ್ನು ಜಮ್ಮು-ಕಾಶ್ಮೀರ ಅಧಿಕಾರಿಗಳು ಬಂಧಿಸಿದ್ದಾರೆ. 
ಪ್ರತ್ಯೇಕತಾವಾದಿ ಮುಖಂಡ ಮಿರ್ವಾಜ್ ಉಮರ್ ಫಾರೂಕ್, ಮುಹಮ್ಮದ್ ಯಾಸೀನ್ ಮಲೀಕ್ ಹಾಗೂ ಆಸಿಯಾ ಅಂದ್ರಾಬಿ ಅವರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂಧಿಸಲಾಗಿದೆ. ಮಿರ್ವಾಜ್ ಉಮರ್ ಫಾರೂಕ್, ಆಸಿಯಾ ಅಂದ್ರಾಬಿ ಅವರನ್ನು ಗೃಹ ಬಂಧನದಲ್ಲಿರಿಸಿದ್ದರೆ ಯಾಸೀನ್ ಮಲೀಕ್ ನ್ನು ಕೇಂದ್ರ ಕಾರಾಗೃಹದಲ್ಲಿ ಬಂಧಿಸಿಡಲಾಗಿದೆ. 
ಪ್ರತ್ಯೇಕತಾವಾದಿ ಮುಖಂಡರು ಧರಣಿಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ರಕ್ಷಣೆಗಾಗಿ ಹೆಚ್ಚುವರಿಯಾಗಿ ಸಿಆರ್ ಪಿಎಫ್ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com