ದೇಶ

ಗೆಳೆಯನ ಜತೆ ಸೇರಿ ಪತ್ನಿ ಮೇಲೆ ಅತ್ಯಾಚಾರ: ಪತಿಯ ಬಂಧನ

ಗೆಳೆಯನ ಜತೆ ಸೇರಿ ಪತ್ನಿ ಮೇಲೆ ಅತ್ಯಾಚಾರ: ಪತಿಯ ಬಂಧನ
ಅತ್ಯಾಚಾರ
Published On :

ಹೈದರಾಬಾದ್: ಸ್ನೇಹಿತನೊಂದಿಗೆ ಸೇರಿ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ  26 ವರ್ಷದವನಾಗಿದ್ದು ಹೈದರಾಬಾದ್ ನ ಮದನ್ ಪೇಟೆಯಲ್ಲಿ ವಾಸವಾಗಿದ್ದ.ಆಸ್ಟ್ರೇಲಿಯಾದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದು, ಆತ 2016ರಲ್ಲಿ 21ರ ಹರೆಯದ ಯುವತಿಯನ್ನು ವಿವಾಹವಾಗಿದ್ದು ಸ್ನೇಹಿತನೊಂದಿಗೆ ಸೆಕ್ಸ್ ನಡೆಸುವಂತೆ ಒತ್ತಾಯಿಸುತ್ತಿದ್ದ ಇದಕ್ಕೆ ಪ್ರತಿರೋಧ ತೋರಿದಾಗ ಅತ್ಯಾಚಾರ ನಡೆಸಿದ್ದಾಗಿ ಸಂತ್ರಸ್ತೆ ದೂರಿದ್ದಾಳೆ.

ಮಾರ್ಚ್ 4ರಂದು ಘಟನೆ ನಡೆದಿದೆ. ಆಸ್ಟ್ರೇಲಿಯಾದಿಂದ ಬಂದ ಪತಿ ಸ್ನೇಹಿತನನ್ನು ಮನೆಗೆ ಕರೆದು ಪತ್ನಿಗೆ ನಿದ್ರೆ ಮಾತ್ರೆಗಳನ್ನು ನೀಡಿ ವಿಕೃತಿ ಮೆರೆದಿದ್ದಾನೆ. ಇನ್ನು ಘಟನೆ ನಡೆದ ಸಂದರ್ಭದಲ್ಲಿ ಆರೋಪಿಯ ತಾಯಿಯೂ ಮನೆಯಲ್ಲಿ ಇದ್ದಿದ್ದರಿಂದ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.