ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿದ ಎನ್ ಪಿಪಿ, ಎನ್ ಪಿಎಫ್

ನ್ಯಾಷಿನಲ್ ಪೀಪಲ್ಸ್ ಪಾರ್ಟಿ(ಎನ್ ಪಿಪಿ) ಹಾಗೂ ನಾಗಾ ಪೀಪಲ್ಸ್ ಫ್ರಂಟ್(ಎನ್ ಪಿಎಫ್) ಮಣಿಪುರದಲ್ಲಿ...
ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ(ಸಾಂದರ್ಭಿಕ ಚಿತ್ರ)
ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ(ಸಾಂದರ್ಭಿಕ ಚಿತ್ರ)
ಇಂಫಾಲ್/ಕೋಹಿಮಾ: ನ್ಯಾಷಿನಲ್ ಪೀಪಲ್ಸ್ ಪಾರ್ಟಿ(ಎನ್ ಪಿಪಿ) ಹಾಗೂ ನಾಗಾ ಪೀಪಲ್ಸ್ ಫ್ರಂಟ್(ಎನ್ ಪಿಎಫ್) ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬೆಂಬಲ ಘೋಷಿಸಿವೆ.
ಶೀಘ್ರದಲ್ಲಿ ಮಣಿಪುರದಲ್ಲಿ ಕಾಂಗ್ರೆಸೇತರ ಸರ್ಕಾರ ರಚನೆಯಾಗಲಿದೆ ಮತ್ತು ನಮ್ಮ ಪಕ್ಷ ಬಿಜೆಪಿ ನೇತೃತ್ವ ಮೈತ್ರಿಕೂಟ ಸರ್ಕಾರಕ್ಕೆ ಬೆಂಬಲ ನೀಡಲಿದೆ ಎಂದು ಎನ್ ಪಿಪಿ ಮುಖ್ಯಸ್ಥ ಕೆ.ಸಂಗ್ಮಾ ಅವರು ಹೇಳಿದ್ದಾರೆ.
ಇನ್ನು ನಾಗಾಲ್ಯಾಂಡ್ ಮುಖ್ಯಮಂತ್ರಿ ಹಾಗೂ ಎನ್ ಪಿಎಫ್ ಮುಖ್ಯಸ್ಥ ಶುರ್ಹೊಝ್ಲೀ ಲೀಝಿತ್ಸು ಅವರು ನೆರೆ ಮಣಿಪುರದಲ್ಲಿ ತಮ್ಮ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ. ಅಲ್ಲದೆ ಎನ್​ಪಿಎಫ್​ನ ನಾಲ್ವರು ಶಾಸಕರು ಈಗಾಗಲೇ ರಾಜ್ಯಪಾಲೆ ನಜ್ಮಾ ಹೆಫ್ತುಲ್ಲಾ ಅವರನ್ನು ಭೇಟಿ ಬಿಜೆಪಿ ಬೆಂಬಲ ನೀಡುವುದಾಗಿ ಪತ್ರ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com