ಕುಪ್ವಾರ ಎನ್'ಕೌಂಟರ್: 2 ಉಗ್ರರನ್ನು ಹೊಡೆದುರುಳಿಸಿದ ಸೇನೆ, ಓರ್ವ ಪೊಲೀಸ್ ಗಾಯ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಯೋಧರು ಹಾಗೂ ಉಗ್ರರ ನಡುವಿನ ಗುಂಡಿನ ಕಾಳಗದಲ್ಲಿ ಓರ್ವ ಪೊಲೀಸ್ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಅಡಗಿ ಕುಳಿತು ದಾಳಿ ನಡೆಸುತ್ತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನಾ ಪಡೆ ಬುಧವಾರ ಹೊಡೆದುರುಳಿಸಿದೆ. 
ಕುಪ್ವಾಲದ ಕಲರೂಸ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಮಾಹಿತಿ ತಿಳಿದುಬಂದಿತ್ತು. ಕೂಡಲೇ 41 ರಜ್ಪುತನ ರೈಫಲ್ಸ್, ಸಿಆರ್'ಪಿಎಫ್ 98 ಬೆಟಾಲಿಯನ್ ಮತ್ತು ಕುಪ್ವಾರದ ವಿಶೇಷ ಪೊಲೀಸ್ ಪಡೆ ಕಾರ್ಯಾಚರಣೆಗಿಳಿದಿತ್ತು. ಈ ವೇಳೆ ಉಗ್ರರು ಸೇನಾ ಪಡೆ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದರು. 
ದಾಳಿ ವೇಳೆ ಓರ್ವ ಪೊಲೀಸ್ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಮೂವರು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿತ್ತು. ಕಾರ್ಯಾಚರಣೆ ವೇಳೆ ಇದೀಗ ಸೇನಾ ಪಡೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ. 
ಪ್ರಸ್ತುತ ಸ್ಥಳದಲ್ಲಿ ಸೇನಾ ಪಡೆ ಸುತ್ತುವರೆದಿದ್ದು, ಸುತ್ತಮುತ್ತಲಿನ ಕೆಲ ಪ್ರದೇಶಗಳಲ್ಲಿ ನಿರ್ಬಂಧ ಹೇರಲಾಗಿದೆ. ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com