ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ವಿಡಿಯೋ ವಿರುದ್ದ ಸಾಕಷ್ಟು ಟೀಕೆಗಳು ವ್ಯಕ್ತವಾಗತೊಡಗಿವೆ. ಪ್ರತಿಭಟನಾಕಾರರು ರಾಷ್ಟ್ರೀಯತೆಯ ಹೆಸರಿನಲ್ಲಿ ಕಲ್ಲು ತೂರಾಟ ನಡೆಸಬಾರದು, ಇಸ್ಲಾಂ ಹೆಸರಿನಲ್ಲಿ ಸೇನಾ ಪಡೆ ಮೇಲೆ ಕಲ್ಲು ತೂರಾಟ ನಡೆಸಬೇಕು. ಯುವ ಕಮಾಂಡರ್ ಗಳು ಪ್ರಜಾಪ್ರಭುತ್ವವೆಂಬ ಸಿದ್ಧಾಂತವನ್ನು ಬದಿಗೊತ್ತಿ, ಇಸ್ಲಾಂ ಎಂಬ ಸಿದ್ಧಾಂತವನ್ನು ಅಳವಡಿಸಿಕೊಳ್ಳಬೇಕಿದೆ. ರಾಷ್ಟ್ರೀಯತೆ ಹಾಗೂ ಪ್ರಜಾಪ್ರಭುತ್ವಕ್ಕೆ ಇಸ್ಲಾಂನಲ್ಲಿ ನಿಷಿದ್ಧವಿದೆ ಮುಸಾ ವಿಡಿಯೋದಲ್ಲಿ ಹೇಳಿದ್ದಾನೆ.