ಪಂಜಾಬ್ ಮುಖ್ಯಮಂತ್ರಿಯಾಗಿ ಕ್ಯಾ.ಅಮರಿಂದರ್ ಸಿಂಗ್ ಪ್ರಮಾಣ ವಚನ ಸ್ವೀಕಾರ

ಪಂಜಾಬ್ ಮುಖ್ಯಮಂತ್ರಿಯಾಗಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಇಂದು ಪ್ರಮಾಣವಚನ...
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕ್ಯಾ.ಅಮರಿಂದರ್ ಸಿಂಗ್
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕ್ಯಾ.ಅಮರಿಂದರ್ ಸಿಂಗ್
ಚಂಡೀಗಢ್(ಪಂಜಾಬ್): ಪಂಜಾಬ್ ಮುಖ್ಯಮಂತ್ರಿಯಾಗಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಇಂದು ಪ್ರಮಾಣವಚನ ಸ್ವೀಕರಿಸಿದರು. ಪಂಜಾಬ್ ರಾಜ್ಯ ಅಭಿವೃದ್ಧಿಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವುದಾಗಿ ಅವರು ಈ ಸಂದರ್ಭದಲ್ಲಿ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿ ಹೇಳಿದರು.
ಸೋಮವಾರದಿಂದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳಿಗೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ಮೊದಲ ಸಂಪುಟ ಸಭೆಯಲ್ಲಿ ಹೆಚ್ಚಿನ ವಿಷಯಗಳನ್ನು ಚರ್ಚೆಗೆ ಕೈಗೆತ್ತಿಕೊಳ್ಳುತ್ತೇನೆ ಎಂದು ಹೇಳಿದರು.
ದಶಕದ ನಂತರ ಪಂಜಾಬ್ ನಲ್ಲಿ ಕ್ಯಾಪ್ಟನ್ ಅಮರಿಂದರ್ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು ರಾಜ್ಯದ 29ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.
ರಾಜ್ಯಪಾಲ ವಿ.ಪಿ.ಸಿಂಗ್ ಬದ್ನೊರೆ ಅಧಿಕಾರ ಗೌಪ್ಯತೆಯ ಪ್ರಮಾಣವನ್ನು ಮುಖ್ಯಮಂತ್ರಿ ಹಾಗೂ 9 ಮಂದಿ ಸಂಪುಟ ಸಚಿವರಿಗೆ ರಾಜಭವನದಲ್ಲಿ ಬೋಧಿಸಿದರು.
ನವಜೋತ್ ಸಿಂಗ್ ಸಿಧು, ಮನ್ ಪ್ರೀತ್ ಸಿಂಗ್ ಬಾದಲ್ ಮತ್ತು ಚರಂಜಿತ್ ಚನ್ನಿ ಮೊದಲಾದ ಶಾಸಕರು ಸಚಿವರಾಗಿ ಅಧಿಕಾರ ವಹಿಸಿಕೊಂಡರು.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್,ಕೇಂದ್ರದ ಮಾಜಿ ಸಚಿವೆ ಅಂಬಿಕಾ ಸೋನಿ ಮೊದಲಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.
177 ಸೀಟುಗಳ ಪಂಜಾಬ್ ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ 77, ಆಮ್ ಆದ್ಮಿ ಪಕ್ಷ 20, ಶಿರೋಮಣಿ ಅಕಾಲಿದಳ ಹಾಗೂ ಬಿಜೆಪಿ ಮೈತ್ರಿಕೂಟ 18 ಸೀಟುಗಳನ್ನು ಗೆದ್ದುಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com