ಪಂಜಾಬ್ ಮುಖ್ಯಮಂತ್ರಿಯಾಗಿ ಅಮರೀಂದರ್ ಸಿಂಗ್ ಇಂದು ಪ್ರಮಾಣ

10 ವರ್ಷಗಳ ಬಳಿಕ ಪಂಜಾಬ್ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾರಣವಾಗಿರುವ ಕ್ಯಾ.ಅಮರೀಂದರ್ ಸಿಂಗ್ ಅವರು ಗುರುವಾರ ಪಂಜಾಬ್ ರಾಜ್ಯ 26ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ...
ಕ್ಯಾ.ಅಮರೀಂದರ್ ಸಿಂಗ್
ಕ್ಯಾ.ಅಮರೀಂದರ್ ಸಿಂಗ್
Updated on
ಚಂಡೀಗಢ: 10 ವರ್ಷಗಳ ಬಳಿಕ ಪಂಜಾಬ್ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾರಣವಾಗಿರುವ ಕ್ಯಾ.ಅಮರೀಂದರ್ ಸಿಂಗ್ ಅವರು ಗುರುವಾರ ಪಂಜಾಬ್ ರಾಜ್ಯ 26ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. 
ರಾಜ್ಯದಲ್ಲಿ ಆರ್ಥಿಕ ಹಿನ್ನಡೆಯಿರುವ ಹಿನ್ನಲೆಯಲ್ಲಿ ಸರಳ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಇತರ ಕಾಂಗ್ರೆಸ್ ನಾಯಕರು ಆಗಮಿಸುವ ನಿರೀಕ್ಷೆಗಳಿವೆ. 
ರಾಜಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಂಜಾಬ್ ರಾಜ್ಯಪಾಲ ವಿ.ಪಿ.ಸಿಂಗ್ ಬದ್ನೋರ್ ಅವರು, ಅಮರೀಂದರ್ ಸಿಂಗ್ ಮತ್ತು ನವಜೋತ್ ಸಿದು, ಮನ್'ಪ್ರೀತ್ ಬಾದಲ್, ಚರಣ್ ಜಿತ್ ಚನ್ನಿ ಸೇರಿದಂತೆ ಇನ್ನಿತರೆ ಸಚಿವರುಗಳಿಗೆ ಪ್ರಮಾಣವಚನ ಬೋಧನೆ ಮಾಡಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com