ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಮಿರ್ಜಾಪುರ್ ನಲ್ಲಿ ಭೇಟಿ ಮಾಡಿದ್ದರು. ಸಿಂಗ್ ಅವರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನಾಗಿಸಲು ಈ ಸಭೆ ನಡೆಸಲಾಗಿತ್ತು ಎಂಬಮಾತುಗಳು ಕೇಳಿ ಬಂದಿದ್ದವು. ಆದರೆ ಉತ್ತರ ಪ್ರದೇಶದ ಮುಂದಿನ ಸಿಎಂ ಯಾರಾಗುತ್ತಾರೆ ಎಂದು ಕೇಳಿದ ಪ್ರಶ್ನಗೆ ಉತ್ತರಿಸಿರುವ ಕೇಂದ್ರ ಸಂಪುಟದ ಹಲವು ಸಚಿವರು, ಪ್ರಾಮಾಣಿಕವಾಗಿ ಹೇಳುತ್ತೇವೆ, ನಮಗೆ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ತಿಳಿದಿಲ್ಲ ಎಂದು ಹೇಳಿದ್ದಾರೆ.