'ಗಿಲ್ಗಿಟ್-ಬಾಲ್ಟಿಸ್ತಾನ್' ವಿವಾದ: ವಿಚಾರ ಪರಿಶೀಲಿಸಿ, ಪ್ರತಿಕ್ರಿಯೆ ನೀಡುತ್ತೇವೆ- ಕೇಂದ್ರ

ಗಿಲ್ಗಿಟ್-ಬಾಲ್ಟಿಸ್ತಾನ್ ಕುರಿತು ಪಾಕಿಸ್ತಾನ ಕೈಗೊಂಡಿರುವ ನಿರ್ಧಾರ ವಿಚಾರವನ್ನು ಪರಿಶೀಲನೆ ನಡೆಸಿ ನಂತರ ಪ್ರತಿಕ್ರಿಯೆ ನೀಡುತ್ತೇವೆಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಗಿಲ್ಗಿಟ್-ಬಾಲ್ಟಿಸ್ತಾನ್ ಕುರಿತು ಪಾಕಿಸ್ತಾನ ಕೈಗೊಂಡಿರುವ ನಿರ್ಧಾರ ವಿಚಾರವನ್ನು ಪರಿಶೀಲನೆ ನಡೆಸಿ ನಂತರ ಪ್ರತಿಕ್ರಿಯೆ ನೀಡುತ್ತೇವೆಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ. 
ಗಿಲ್ಗಿಟ್-ಬಾಲ್ಟಿಸ್ತಾನ್'ಗೆ 5ನೇ ಪ್ರಾಂತ್ರ್ಯ ಸ್ಥಾನಮಾನ ನೀಡಲು ಪಾಕಿಸ್ತಾನ ನಿರ್ಧಾರ ಕೈಗೊಂಡಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ.ಕೆ ಸಿಂಗ್ ಅವರು, ಗಿಲ್ಗಿಟ್ ಹಾಗೂ ಬಾಲ್ಟಿಸ್ತಾನ ವಿಚಾರ ಕುರಿತಂತೆ ಪಾಕಿಸ್ತಾನ ತೆಗೆದುಕೊಂಡಿರುವ ನಿರ್ಧಾರದ ಕುರಿತು ಪರಿಶೀಲನೆ ನಡೆಸುತ್ತೇವೆ. ಪರಿಶೀಲನೆ ಬಳಿಕ ವಿದೇಶಾಂಗ ಸಚಿವಾಲಯದ ವಕ್ತಾರರು ಪ್ರತಿಕ್ರಿಯೆ ನೀಡುತ್ತಾರೆಂದು ತಿಳಿಸಿದ್ದಾರೆ. 
ಭಾರತ-ಪಾಕಿಸ್ತಾನ ವಿಭಜನೆಗೂ ಮುನ್ನ ಗಿಲ್ಗಿಟ್-ಬಾಲ್ಟಿಸ್ಟಾನ ಪ್ರದೇಶಗಳು ಭಾರತದ ಭಾಗವೇ ಆಗಿದ್ದವು. ಪಾಕಿಸ್ತಾನದ ಉತ್ತರದ ಭಾಗದ ತುತ್ತತುದಿಯಲ್ಲಿರುವ ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶ ಭಾರತಕ್ಕೆ ಸೇರಿದ್ದು. ಈ ಭಾಗ ಭಾರತ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದೊಂದಿಗೆ ಗಡಿ ಹಂಚಿಕೊಂಡಿದೆ. ಈಗಲೂ ಭಾರತದ ನಕಾಶೆಯಲ್ಲಿ ಗಿಲ್ಟಿಟ್-ಬಾಲ್ಟಿಸ್ತಾನ್ ಕಾಣಿಸಿಕೊಳ್ಳುತ್ತದೆ. ಆದರೂ, ಈ ಜಾಗವನ್ನು ಬಹು ಹಿಂದೆಯೇ ಪಾಕಿಸ್ತಾನ ರಾಷ್ಟ್ರ ಅಕ್ರಮವಾಗಿ ವಶಪಡಿಸಿಕೊಂಡು ಅದನ್ನು ತನ್ನ ಬಳಿಯೇ ಇಟ್ಟುಕೊಂಡಿದೆ. ಈ ಭಾಗ ತನ್ನದೆಂದು ದಶಕಗಳಿಂದ ಹೇಳಿಕೊಂಡು ಬಂದಿದ್ದರೂ, ಪಾಕಿಸ್ತಾನ ಮಾತ್ರ ಈ ಭಾಗಕ್ಕೆ ರಾಜ್ಯದ ಸ್ಥಾನಮಾನ ನೀಡಿರಲಿಲ್ಲ. 
ಗಡಿಯಲ್ಲಿ ನಿರ್ಮಾಣವಾಗಿರುವ ಪ್ರಕ್ಷುಬ್ಧ ವಾತಾವರಣದಿಂದಾಗಿ ಈಗಾಗಲೇ ಭಾರತ ಮತ್ತು ಪಾಕಿಸ್ತಾನ ಸಂಬಂಧ ಹದಗೆಟ್ಟಿದ್ದು, ಇಂತಹ ಸಂದರ್ಭದಲ್ಲಿಯೇ ಪಾಕಿಸ್ತಾನ ಈ ರೀತಿಯ ನಿರ್ಧಾರ ಕೈಗೊಂಡಿರುವುದು ಉಭಯ ರಾಷ್ಟ್ರಗಳ ಸಂಬಂಧ ಇನ್ನಷ್ಟು ಬಿಗಡಾಯಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com