ಪಂಜಾಬ್ ನೂತನ ಸಚಿವರಾಗಿ ಮಾಜಿ ಕ್ರಿಕೆಟಿಗ ಸಿಧು ಪ್ರಮಾಣ

ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರು ಶುಕ್ರವಾರ ಪಂಜಾಬ್ ನ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ನವಜೋತ್ ಸಿಂಗ್ ಸಿಧು
ನವಜೋತ್ ಸಿಂಗ್ ಸಿಧು
Updated on: 
ಚಂಡೀಗಢ: ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರು ಶುಕ್ರವಾರ ಪಂಜಾಬ್ ನ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಇಂದು ಸ್ಥಳೀಯ ಆಡಳಿತ ಹಾಗೂ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವರಾಗಿ ಸಿಧು ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆ ಅವರ ಪತ್ನಿ ಹಾಗೂ ಮಾಜಿ ಸಂಸದೀಯ ಕಾರ್ಯದರ್ಶಿ ನವಜೋತ್ ಕೌರ್, ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಹಾಕಿ ಒಲಂಪಿಯನ್ ಸೇರಿದಂತೆ ಹಲವು ಗಣ್ಣರು ಉಪಸ್ಥಿತರಿದ್ದರು.
ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಮಾಜಿ ಕ್ರಿಕೆಟಿಗ, ನಾನು ಕಪಿಲ್ ಶರ್ಮಾ ಅವರ ಟಿವಿ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಜನರ ವಿರೋಧ ಇಲ್ಲ. ಒಂದು ವೇಳೆ ಅದನ್ನು ವಿರೋಧಿಸಿದ್ದರೆ ನಾನು 43 ಸಾವಿರ ಮತಗಳ ಅಂತರದಿಂದ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ನಾನು ಆ ಕಾರ್ಯಕ್ರಮದಲ್ಲಿ ಮುಂದುವರೆಯುತ್ತೇನೆ ಎಂದು ಹೇಳಿದ್ದಾರೆ.
ಅಮೃತಸರ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಸಿಧು ಅವರು, ಸಚಿವರ ಕೆಲಸದೊಂದಿಗೆ ಟಿವಿ ಕಾರ್ಯಕ್ರಮವನ್ನೂ ನಿರ್ವಹಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com