ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಸಿಬಿಐಗೆ ನಾರದ ಸ್ಟಿಂಗ್ ಆಪರೇಷನ್ ತನಿಖೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಮಮತಾ

ತೃಣಮೂಲ ಕಾಂಗ್ರೆಸ್ ನ ನಾಯಕರ ವಿರುದ್ಧ ನಡೆದಿದ್ದ ನಾರದ ಸ್ಟಿಂಗ್ ಕಾರ್ಯಾಚರಣೆ ಸಂಬಂಧ ಪ್ರಾಥಮಿಕ ತನಿಖೆ ನಡೆಸುವಂತೆ ಸಿಬಿಐಗೆ ಕೊಲ್ಕತ್ತಾ
Published on
ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ ನ ನಾಯಕರ ವಿರುದ್ಧ ನಡೆದಿದ್ದ ನಾರದ ಸ್ಟಿಂಗ್ ಕಾರ್ಯಾಚರಣೆ ಸಂಬಂಧ  ಪ್ರಾಥಮಿಕ ತನಿಖೆ ನಡೆಸುವಂತೆ ಸಿಬಿಐಗೆ ಕೊಲ್ಕತ್ತಾ ಹೈಕೋರ್ಟ್ ಆದೇಶಿಸಿದ್ದು ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವುದಾಗಿ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. 
ನಾನು ಹೈಕೋರ್ಟ್ ಆದೇಶದ ಬಗ್ಗೆ ಏನನ್ನು ಹೇಳುವುದಿಲ್ಲ ಆದರೆ ಈ ಆದೇಶವನ್ನು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಲಾಗುವುದು. ಇದೇ ವೇಳೆ ಎಲ್ಲರಿಗೂ ಗೊತ್ತು ನಾರದ ಸ್ಟಿಂಗ್ ಆಪರೇಷನ್ ಅನ್ನು ಭಾರತೀಯ ಜನತಾ ಪಕ್ಷದಲ್ಲಿ ಬಿಡುಗಡೆ ಮಾಡಲಾಗಿದ್ದು ಇದರ ಹಿಂದೆ ರಾಜಕೀಯ ಪಕ್ಷದ ಕೈವಾಡವಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. 
ಮುಖ್ಯ ನ್ಯಾಯಮೂರ್ತಿ ನಿಶಿತಾ ಮಾತ್ರೆ ಮತ್ತು ನ್ಯಾ. ಟಿ ಚಕ್ರಬೋರ್ತಿ ಅವರನ್ನೊಳಗೊಂಡ ವಿಭಾಗೀಯ ಪೀಠ, ಸಿಬಿಐ ತನಿಖೆ ನಡೆಸುವಂತೆ ಆದೇಶಿಸಿದೆ. ಕಾರ್ಯಾಚರಣೆ ಸಂಬಂಧ ಲಭ್ಯವಿರುವ ಎಲ್ಲಾ ವಸ್ತುಗಳನ್ನು 24 ಗಂಟೆಗಳಲ್ಲಿ ವಶಕ್ಕೆ ಪಡೆದು 72 ಗಂಟೆಯೊಳಗೆ ಪ್ರಾಥಮಿಕ ತನಿಖಾ ವರದಿ ತಯಾರಿಸಿ ಕೊಡಬೇಕು ಎಂದು ಹೈಕೋರ್ಟ್ ಇಂದು ಆದೇಶಿಸಿತ್ತು. 
2016ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ವೇಳೆ ಕೆಲ ರಾಜಕೀಯ ನಾಯಕರು ಹಣ ಪಡೆಯುತ್ತಿರುವ ದೃಶ್ಯಾವಳಿಗಳು ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com