'ಮಾರುತಿ' ಹಿಂಸಾಚಾರ ಪ್ರಕರಣ; 13 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಹರ್ಯಾಣದ ಮಾನೇಸರ್ ನಲ್ಲಿ ಐದು ವರ್ಷಗಳ ಹಿಂದೆ ಮಾರುತಿ ಸುಜುಕಿ ಕಾರು ತಯಾರಿಕಾ ಘಟಕದಲ್ಲಿ ನಡೆದಿದ್ದ ಹಿಂಸಾಚಾರ....
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಗುರುಗ್ರಾಮ: ಹರ್ಯಾಣದ ಮಾನೇಸರ್ ನಲ್ಲಿ ಐದು ವರ್ಷಗಳ ಹಿಂದೆ ಮಾರುತಿ ಸುಜುಕಿ ಕಾರು ತಯಾರಿಕಾ ಘಟಕದಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುಗ್ರಾಮ ಕೋರ್ಟ್ 13 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ನಾಲ್ವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿ ಶನಿವಾರ ತೀರ್ಪು ನೀಡಿದೆ.
ಮಾರ್ಚ್ 10ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ 31 ಆರೋಪಿಗಳು ತಪ್ಪಿತಸ್ಥರು ಎಂದು ತೀರ್ಪು ನೀಡಿದ್ದ ಜಿಲ್ಲಾ ನ್ಯಾಯಾಲಯ, ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿತ್ತು. ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದ ಕೋರ್ಟ್, 13 ಮಂದಿ ವಿರುದ್ಧ ಐಪಿಸಿ ಸೆಕ್ಷನ್ 302ರ ಅಡಿ ಕೊಲೆ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ಅವರಿಗೆ ಜೀವಾವಧಿ ಶಿಕ್ಷೆ ಹಾಗೂ ದೊಂಬಿ ಆರೋಪ ಎದುರಿಸುತ್ತಿದ್ದ ನಾಲ್ವರಿಗೆ ಐದು ವರ್ಷ ಶಿಕ್ಷೆ ನೀಡಿ ಇತರೆ 14 ಮಂದಿ ಈಗಾಗಲೇ ಸಾಕಷ್ಟು ಜೈಲು ಶಿಕ್ಷೆ ಅನುಭವಿಸಿದ್ದಾರೆ ಎಂದು ಹೇಳಿದೆ.
2012ರ ಜುಲೈ 18 ರಂದು ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಲಯ ಮಾರ್ಚ್ 10ರಂದು ಅಂತಿಮ ತೀರ್ಪು ನೀಡಿತ್ತು. ಬಂಧಿತ 148 ಕಾರ್ಮಿಕರ ಪೈಕಿ 31 ಮಂದಿ ವಿರುದ್ಧ ಆರೋಪ ಸಾಭೀತಾದ ಹಿನ್ನಲೆಯಲ್ಲಿ ಅವರನ್ನು ದೋಷಿಗಳೆಂದು ಘೋಷಿಸಿ ಉಳಿದ 117 ಮಂದಿಯನ್ನು ಪ್ರಕರಣದಿಂದ ವಜಾಗೊಳಿಸಿತ್ತು.
2012ರಲ್ಲಿ ಸಂಸ್ಥೆ ಯಾವುದೇ ಮುನ್ಸೂಚನೆ ನೀಡದೇ ಏಕಾಏಕಿ 550 ಖಾಯಂ ಕಾರ್ಮಿಕರು ಮತ್ತು 1800 ಗುತ್ತಿಗೆ ಕಾರ್ಮಿಕರನ್ನು ತೆಗೆದು ಹಾಕಿದ್ದು, ಅಂದಿನ ಹಿಂಸಾಚಾರಕ್ಕೆ ಕಾರಣವಾಗಿತ್ತು. ಏಕಾಏಕಿ ಕಾರ್ಮಿಕರನ್ನು  ವಜಾಗೊಳಿಸಿದ್ದನ್ನು ವಿರೋಧಿಸಿ ಮಾನೇಸರ್ ಘಟಕದಲ್ಲಿ 2012ರ ಜುಲೈ 18 ರಂದು ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಕಾರ್ಮಿಕರು ಮತ್ತು ಆಡಳಿತ ಮಂಡಳಿಯ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು, ಏಕಾಏಕಿ  ಹಿಂಸಾಚಾರ ಏರ್ಪಟ್ಟಿತ್ತು. ಉದ್ರಿಕ್ತ ಕಾರ್ಮಿಕರು ಮಾರಕಾಸ್ತ್ರಗಳಿಂದ ದಾಳಿ ಮಾಡಿ, ಕಂಪನಿಯ ಹಲವು ಭಾಗಗಳಿಗೆ ಬೆಂಕಿ ಹಚ್ಚಿದ್ದರು. ಅಂದಿನ ಗಲಭೆಯಲ್ಲಿ ಸಂಸ್ಥೆಯ ಮಾನವ ಸಂಪನ್ಮೂಲ ನಿರ್ವಹಣಾಧಿಕಾರಿ ಅವನೀಶ್  ಕುಮಾರ್ ದೇವ್ ಎಂಬುವವರು ಮೃತಪಟ್ಟಿದ್ದರು. ಅಲ್ಲದೆ 94 ಮಂದಿ ಮ್ಯಾನೇಜರ್ ಗಳು, ಸೂಪರ್ ವೈಸರ್ ಗಳು ಸೇರಿದಂತೆ ಹಲವು ಅಧಿಕಾರಿಗಳು ಗಾಯಗೊಂಡಿದ್ದರು. ಅಂತೆಯೇ 9 ಮಂದಿ ಪೊಲೀಸರು ಕೂಡ  ಗಾಯಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com