ಉತ್ತರ ಪ್ರದೇಶಕ್ಕೆ ಮನೋಜ್ ಸಿನ್ಹಾ ಸಾರಥ್ಯ?

ಪ್ರಧಾನಿ ನರೇಂದ್ರ ಮೋದಿ ಮನೋಜ್ ಸಿನ್ಹಾ ಅವರೇ ಮುಖ್ಯಮಂತ್ರಿಯಾಗಬೇಕೆಂಬ ಅಭಿಪ್ರಾಯ ಹೊಂದಿದ್ದಾರೆ ಎಂಬ ವರದಿಗಳು ಪ್ರಕಟವಾಗಿವೆ.
ಮನೋಜ್ ಸಿನ್ಹಾ
ಮನೋಜ್ ಸಿನ್ಹಾ
ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ಕೇಂದ್ರ ರೈಲ್ವೆ ರಾಜ್ಯ ಸಚಿವ ಮನೋಜ್ ಸಿನ್ಹಾ ಹೆಸರು ಮುಂಚೂಣಿಯಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ ಮನೋಜ್ ಸಿನ್ಹಾ ಅವರೇ ಮುಖ್ಯಮಂತ್ರಿಯಾಗಬೇಕೆಂಬ ಅಭಿಪ್ರಾಯ ಹೊಂದಿದ್ದಾರೆ ಎಂಬ ವರದಿಗಳು ಪ್ರಕಟವಾಗಿವೆ. 
ಮನೋಜ್ ಸಿನ್ಹಾ ಅವರ ಹೆಸರಿನೊಂದಿಗೆ  8 ಬಾರಿ ಶಾಸಕರಾಗಿರುವ ಸುರೇಶ್ ಖನ್ನಾ ಅವರ ಹೆಸರೂ ಕೇಳಿಬರುತ್ತಿದ್ದು, ಮಾ.18 ರಂದು ಸಂಜೆ ಲಖನೌದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು ಸಿಎಂ ಯಾರಾಗಲಿದ್ದಾರೆ ಎಂಬುದನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ಸಚಿವೆ ವೆಂಕಯ್ಯ ನಾಯ್ಡು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ವೀಕ್ಷಕರಾಗಿ ಭಾಗವಹಿಸಲಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯವಾಗಿ ಸಿಎಂ ಆಯ್ಕೆ ವೇಳೆಯಲ್ಲಿ ನಡೆಯುವ ಸಮೀಕರಣಗಳನ್ನು ಬದಿಗಿರಿಸಿ, ಸಾಮರ್ಥ್ಯ ಮತ್ತು ಅಭಿವೃದ್ಧಿಯ ಬದ್ಧತೆ ಇರುವ ವ್ಯಕ್ತಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂಬ ನಿಲುವು ಹೊಂದಿದ್ದಾರೆ. ಇದೇ ಕಾರಣದಿಂದಾಗಿ ಮನೋಜ್ ಸಿನ್ಹಾ ಅವರನ್ನು ಉತ್ತರ ಪ್ರದೇಶ ಸಿಎಂ ಆಗಿ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com