'ಅಯೋಗ್ಯ' ಯೋಗಿಯನ್ನು ಸಿಎಂ ಮಾಡುವ ಮೂಲಕ ಬಿಜೆಪಿ ದೊಡ್ಡ ತಪ್ಪು ಮಾಡಿದೆ: ತೇಜಸ್ವಿ ಯಾದವ್

'ಅಯೋಗ್ಯ' ಯೋಗಿ ಆದಿತ್ಯನಾಥ್ ಅವರನ್ನು ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುವ ಮೂಲಕ ಭಾರತೀಯ ಜನತಾ ಪಾರ್ಟಿ ದೊಡ್ಡ ತಪ್ಪು ಮಾಡಿದೆ ಎಂದು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು...
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
ನವದೆಹಲಿ: 'ಅಯೋಗ್ಯ' ಯೋಗಿ ಆದಿತ್ಯನಾಥ್ ಅವರನ್ನು ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುವ ಮೂಲಕ ಭಾರತೀಯ ಜನತಾ ಪಾರ್ಟಿ ದೊಡ್ಡ ತಪ್ಪು ಮಾಡಿದೆ ಎಂದು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಶನಿವಾರ ಹೇಳಿದ್ದಾರೆ. 
ಯೋಗಿ ಆದಿತ್ಯನಾಥ್ ಅವರನ್ನು ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವುದರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಮುಖ್ಯಮಂತ್ರಿ ಹುದ್ದೆಗೆ ಯೋಗಿ ಆದಿತ್ಯನಾಥ್ ಅವರು ಸಮರ್ಥರಲ್ಲ. ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡುವ ಮೂಲಕ ದೊಡ್ಡ ತಪ್ಪನ್ನು ಮಾಡಿದೆ. ಮುಖ್ಯಮಂತ್ರಿ ಸ್ಥಾನ ಆಯ್ಕೆಯಲ್ಲಿ ಬಿಜೆಪಿ ಪಾಳಯದಲ್ಲಿ ಮನಸ್ಥಾಪ ಉಂಟಾಗಿದೆ. ಪಕ್ಷದಲ್ಲಿ ಗುಂಪುಗಾರಿಗೆ ನಡೆಯುತ್ತಿದೆ ಎಂಬುದನ್ನು ಪಕ್ಷದ ಸದಸ್ಯರಿಂದಲೇ ತಿಳಿಯಬಹುದಾಗಿದೆ ಎಂದು ತಿಳಿಸಿದ್ದಾರೆ. 
ನಿನ್ನೆಯಷ್ಟೇ ಬಿಜೆಪಿ ನಾಯಕರು ಲಖನೌ ಲೋಕಭವನದಲ್ಲಿ ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಿದ್ದರು. ಈ ವೇಳೆ ಯೋಗಿ ಆದಿತ್ಯನಾಥ್ ಅವರನ್ನು ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿತ್ತು. ಇಂದು ಮಧ್ಯಾಹ್ನ ಯೋಗಿ ಆದಿತ್ಯನಾಥ್ ಅವರು ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com