ಉ.ಪ್ರದೇಶ ಸಿಎಂ ಆಯ್ಕೆ ವಿಚಾರ: ಮೋದಿ ನಿರ್ಧಾರದಿಂದ ಮುಸ್ಲಿಂ ಸಮುದಾಯಕ್ಕೆ ಬೇಸರ- ಮೌಲ್ವಿ

ಯೋಗಿ ಆದಿತ್ಯನಾಥ್ ಅವರನ್ನು ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವ ಪ್ರಧಾನಮಂತ್ರಿ ನರೇಂದ್ರಮೋದಿಯವರ ನಿರ್ಧಾರಕ್ಕೆ ಮುಸ್ಲಿಂ ಸಮುದಾಯಗಳು ತೀವ್ರ ಬೇಸರವನ್ನು ವ್ಯಕ್ತಪಡಿಸುತ್ತಿದೆ ಎಂದು ಮುಸ್ಲಿಂ ಮೌಲ್ವಿ ಮೌಲಾನಾ ಮೊಹಮ್ಮದ್ ಸಾಜಿದ್ ರಶಿದಿ...
ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ
ನವದೆಹಲಿ: ಯೋಗಿ ಆದಿತ್ಯನಾಥ್ ಅವರನ್ನು ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವ ಪ್ರಧಾನಮಂತ್ರಿ ನರೇಂದ್ರಮೋದಿಯವರ ನಿರ್ಧಾರಕ್ಕೆ ಮುಸ್ಲಿಂ ಸಮುದಾಯಗಳು ತೀವ್ರ ಬೇಸರವನ್ನು ವ್ಯಕ್ತಪಡಿಸುತ್ತಿದೆ ಎಂದು ಮುಸ್ಲಿಂ ಮೌಲ್ವಿ ಮೌಲಾನಾ ಮೊಹಮ್ಮದ್ ಸಾಜಿದ್ ರಶಿದಿ ಅವರು ಭಾನುವಾರ ಹೇಳಿದ್ದಾರೆ. 
ಈ ಕುರಿತಂತೆ ಮಾತನಾಡಿರುವ, ಬಿಜೆಪಿ ಆಯ್ಕೆಯಿಂದಾಗಿ ಬಹಳ ಬೇಸರವಾಗಿದೆ. ಕೊಲೆ ಯತ್ನ ಆರೋಪವನ್ನು ಎದುರಿಸುತ್ತಿರುವ ವ್ಯಕ್ತಿಯೊಬ್ಬನನ್ನು ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಹೇಗೆ ಆಯ್ಕೆ ಮಾಡಿದ್ದಾರೆಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ. 
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭಿವೃದ್ಧಿ ಅಜೆಂಡಾ ಮೇಲೆ ನಂಬಿಕೆಯಿಲ್ಲ ಕನಿಷ್ಟ ಶೇ.13 ರಷ್ಟು ರಾಜ್ಯದ ಮುಸ್ಲಿಮರು ಈ ಬಾರಿ ಬಿಜೆಪಿಗೆ ಮತವನ್ನು ಹಾಕಿದ್ದಾರೆ. ಮೋದಿಯವರ ಈ ನಿರ್ಧಾರದಿಂದಾಗಿ ಇದೀಗ ಮುಸ್ಲಿಂ ಸಮುದಾಯ ತೀವ್ರ ಬೇಸರವನ್ನು ವ್ಯಕ್ತಪಡಿಸುತ್ತಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com