ಜಿಎಸ್ ಟಿಗೆ ಸಂಬಂಧಿಸಿದ 4 ಮಸೂದೆಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ) ಗೆ ಸಂಬಂಧಿಸಿದ 4 ಮಸೂದೆಗಳಿಗೆ ಕೇಂದ್ರ ಸಚಿವ ಸಂಪುಟ ಸಭೆ ಮಾ.20 ರಂದು ಅನುಮೋದನೆ ನೀಡಿದೆ.
ಕೇಂದ್ರ ಸಚಿವ ಸಂಪುಟ
ಕೇಂದ್ರ ಸಚಿವ ಸಂಪುಟ
ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ) ಗೆ ಸಂಬಂಧಿಸಿದ 4 ಮಸೂದೆಗಳಿಗೆ ಕೇಂದ್ರ ಸಚಿವ ಸಂಪುಟ ಸಭೆ ಮಾ.20 ರಂದು ಅನುಮೋದನೆ ನೀಡಿದೆ. 
ವಿಸ್ತೃತ ಚರ್ಚೆ ನಡೆಸಿ ಜಿ.ಎಸ್.ಟಿ ಕೌನ್ಸಿಲ್ ಒಪ್ಪಿಗೆ ನೀಡಿದ್ದ ಕೇಂದ್ರ ಸರಕು ಮತ್ತು ಸೇವಾ ತೆರಿಗೆ ಮಸೂದೆ (ಸಿ.ಜಿ.ಎಸ್.ಟಿ) ಮಸೂದೆ 2017, ಏಕೀಕೃತ ಸರಕು ಮತ್ತು ಸೇವಾ ತೆರಿಗೆ ಮಸೂದೆ-2017, ಕೇಂದ್ರಾಡಳಿತ ಪ್ರದೇಶ ಸರಕು ಮತ್ತು ಸೇವಾ ತೆರಿಗೆ ಮಸೂದೆ-2017, ಜಿಎಸ್ ಟಿ ಮಸೂದೆ (ರಾಜ್ಯಗಳಿಗೆ ಪರಿಹಾರ ನೀಡುವ ಮಸೂದೆ)-2017 ಕ್ಕೆ ಕೇಂದ್ರ ಸಚಿವ ಸಂಪುಟದಲ್ಲೂ ಅನುಮೋದನೆ ದೊರೆತಿದೆ. 
ಅತಿ ಶೀಘ್ರವೇ ಜಿ.ಎಸ್.ಟಿ ಮಸೂದೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ಸರ್ಕಾರ ತಿಳಿಸಿದೆ. ಸುಮಾರು 6 ತಿಂಗಳ ಕಾಲ 12 ಸುತ್ತಿನ ಸಭೆಯಲ್ಲಿ ಜಿ.ಎಸ್.ಟಿ ಕೌನ್ಸಿಲ್ ಮಸೂದೆಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಿದ್ದು ಅನುಮೋದನೆ ನೀಡಿದೆ. ಈಗ ಕೇಂದ್ರ ಸಚಿವ ಸಂಪುಟದಲ್ಲಿಯೂ ಮಸೂದೆಗಳಿಗೆ ಅನುಮೋದನೆ ದೊರೆತಿದ್ದು, ಸಂಸತ್ ನಲ್ಲಿ ಮಂಡನೆಯಾಗಬೇಕಿದೆ. ಈ ಬಗ್ಗೆ ಹಣಕಾಸು ಇಲಾಖೆ ರಾಜ್ಯ ಸಚಿವ ಸಂತೋಷ್ ಕುಮಾರ್ ಗಂಗ್ವರ್ ಮಾಹಿತಿ ನೀಡಿದ್ದು, 10 ದಿನಗಳಲ್ಲಿ ಜೆ.ಎಸ್.ಟಿಗೆ ಸಂಬಂಧಿಸಿದ ಮಸೂದೆಗಳನ್ನು ಸಂಸತ್ ನಲ್ಲಿ ಮಂಡಿಸಲಾಗುತ್ತದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com