ಮಹಿಳಾ ಮಸೂದೆ ಅಂಗೀಕಾರಕ್ಕೆ ಒತ್ತಾಯಿಸಿ ದೆಹಲಿಯಲ್ಲಿ ಡಿಎಂಕೆಯಿಂದ ಪ್ರತಿಭಟನಾ ಮೆರವಣಿಗೆ

ಮಹಿಳಾ ಮೀಸಲಾತಿ ಮಸೂದೆಯನ್ನು ಕೂಡಲೇ ಅಂಗೀಕರಿಸಬೇಕು ಎಂದು ಒತ್ತಾಯಿಸಿ ರಾಜ್ಯಸಭಾ ಸದಸ್ಯೆ ಕನಿಮೋಳಿ ನೇತೃತ್ವದಲ್ಲಿ....
ಕನಿಮೋಳಿ
ಕನಿಮೋಳಿ
ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಯನ್ನು ಕೂಡಲೇ ಅಂಗೀಕರಿಸಬೇಕು ಎಂದು ಒತ್ತಾಯಿಸಿ ರಾಜ್ಯಸಭಾ ಸದಸ್ಯೆ ಕನಿಮೋಳಿ ನೇತೃತ್ವದಲ್ಲಿ ಸೋಮವಾರ ಡಿಎಂಕೆ ಸದಸ್ಯರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಈ ವೇಳೆ ಮಾತನಾಡಿದ ಕನಿಮೋಳಿ, ಲೋಕಸಭೆಯಲ್ಲಿ ಹಾಗೂ ರಾಜ್ಯದ ಎಲ್ಲಾ ವಿಧಾನಸಭೆಯಲ್ಲಿ ಶೇ.33ರಷ್ಟು ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಮಹಿಳಾ ಮಸೂದೆಯನ್ನು ಇದುವರೆಗೂ ಏಕೆ ಅಂಗೀಕರಿಸಿಲ್ಲ? ಕಳೆದ 20 ವರ್ಷಗಳಿಂದ ಬಾಕಿ ಉಳಿದದ್ದು ಏಕೆ? ಎಂದು ಪ್ರಶ್ನಿಸಿದ್ದಾರೆ.
ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಇದುವರೆಗೆ ಯಾರೊಬ್ಬರೂ ಗಮನ ಹರಿಸಿಲ್ಲ. ಮಾಧ್ಯಮ ಸಹ ಈ ಬಗ್ಗೆ ಯಾವುದೇ ಗಮನ ಹರಿಸುತ್ತಿಲ್ಲ. ಹೀಗಾಗಿ ನಾವು ಈ ಬಗ್ಗೆ ಗಮನ ಸೆಳೆಯಲು ಪ್ರತಿಭಟನೆ ಮಾಡುತ್ತಿದ್ದು, ಮಹಿಳಾ ಮಸೂದೆ ಬೆಂಬಲಿಸುವ ಎಲ್ಲಾ ಸಮಾನ ಮನಸ್ಕ ಪಕ್ಷಗಳು ನಮ್ಮೊಂದಿಗೆ ಕೈಜೋಡಿಸಲಿ ಎಂದು ಕನಿಮೋಳಿ ಹೇಳಿದ್ದಾರೆ.
ಈ ಮುಂಚೆ ಮಾರ್ಚ್ 17ರಂದು ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಮಹಿಳಾ ಮೀಸಲಾತಿ ಮಸೂದೆ ಅಂಗೀಕರಿಸುವಂತೆ ಒತ್ತಾಯಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com