ಇಡಿಯಿಂದ ವಿವಾದಿತ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್‌ ಎನ್ ಜಿಒ ಆಸ್ತಿ ಮುಟ್ಟುಗೊಲು

ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಡಾ. ಝಾಕಿರ್ ನಾಯ್ಕ್‌ ಒಡೆತನದ ಎನ್ ಜಿಒ ಇಸ್ಲಾಮಿಕ್‌ ರಿಸರ್ಚ್‌ ಫೌಂಡೇಷನ್‌ (ಐಆರ್‌ಎಫ್‌) ಸಂಸ್ಥೆಗೆ...
ಝಾಕಿರ್ ನಾಯ್ಕ್
ಝಾಕಿರ್ ನಾಯ್ಕ್
ನವದೆಹಲಿ: ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಡಾ. ಝಾಕಿರ್  ನಾಯ್ಕ್‌ ಒಡೆತನದ ಎನ್ ಜಿಒ ಇಸ್ಲಾಮಿಕ್‌ ರಿಸರ್ಚ್‌ ಫೌಂಡೇಷನ್‌ (ಐಆರ್‌ಎಫ್‌) ಸಂಸ್ಥೆಗೆ ಸೇರಿದ ಸುಮಾರು 18.37 ಕೋಟಿ ರುಪಾಯಿ ಮೌಲ್ಯದ ಆಸ್ತಿಯನ್ನು ಸೋಮವಾರ ಜಾರಿ ನಿರ್ದೇಶನಾಲಯ(ಇಡಿ) ಮುಟ್ಟುಗೊಲು ಹಾಕಿಕೊಂಡಿದೆ. 
ಇತ್ತೀಚಿಗಷ್ಟೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಝಾಕಿರ್ ನಾಯ್ಕ್ ಗೆ ನೋಟಿಸ್ ನೀಡಿದ್ದ ಜಾರಿ ನಿರ್ದೇಶನಾಲಯ, ಇದೆ ಕೊನೆ ನೋಟಿಸ್ ಆಗಿದ್ದು, ವಿಚಾರಣೆಗೆ ಹಾಜರಾಗದಿದ್ದರೆ ಆರೋಪಿ ವಿರುದ್ಧ ಬಂಧನ ವಾರಂಟ್ ಜಾರಿ ಮಾಡುವಂತೆ ಕೋರ್ಟ್ ಮೊರೆ ಹೋಗುವ ಸೂಚನೆ ನೀಡಿತ್ತು. 
ಈ ಮಧ್ಯೆ ಕೋಮುವಾದ ಮತ್ತು ಭಯೋತ್ಪಾದನೆ ಪ್ರಚೋದಕ ಭಾಷಣಗಳನ್ನು ಪ್ರಸ್ತುತ ಪಡಿಸಿರುವ ಆರೋಪದಡಿ ಝಾಕಿರ್ ನಾಯಕ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಮಾರ್ಚ್ 30ರೊಳೆಗೆ ವಿಚಾರಣೆಗೆ ಹಾಜರಾಗುವಂತೆ ವಿವಾದಿತ ಧರ್ಮ ಪ್ರಚಾರಕನಿಗೆ ಸೂಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com