ವಿವಾದಿತ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್‌ ಗೆ ಎನ್ಐಎ ನೋಟಿಸ್

ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಡಾ. ಝಾಕಿರ್ ನಾಯ್ಕ್‌ ಗೆ ಸೋಮವಾರ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐಎ) ಎರಡನೇ ಬಾರಿ....
ಝಾಕಿರ್ ನಾಯ್ಕ್
ಝಾಕಿರ್ ನಾಯ್ಕ್
ನವದೆಹಲಿ: ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಡಾ. ಝಾಕಿರ್  ನಾಯ್ಕ್‌ ಗೆ ಸೋಮವಾರ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐಎ) ಎರಡನೇ ಬಾರಿ ನೋಟಿಸ್ ಜಾರಿ ಮಾಡಿದ್ದು, ಮಾರ್ಚ್ 30ರೊಳೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಎನ್ಐಎ ಈ ತಿಂಗಳಲ್ಲಿ ಆರಂಭದಲ್ಲಿ ಝಾಕಿರ್ ನಾಯ್ಕ್ ಗೆ ನೋಟಿಸ್ ಜಾರಿ ಮಾಡಿ, ಮಾರ್ಚ್ 14ರೊಳೆಗೆ ವಿಚಾರಣೆಗೆ ಹಾಜರಾಗುವಂತೆ ಆದೇಶಿಸಿತ್ತು. ಆದರೆ ಝಾಕಿರ್ ನಾಯ್ಕ್ ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಎನ್ಐ ಎ ಇಂದು ಮತ್ತೊಂದು ನೋಟಿಸ್ ಜಾರಿ ಮಾಡಿದೆ.
ಕಳೆದ ವರ್ಷದ ಢಾಕಾದಲ್ಲಿ ನಡೆದ ಕೇಫೆ ದಾಳಿಯ ಉಗ್ರರಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಝಾಕಿರ್ ನಾಯ್ಕ್ ವಿರುದ್ಧ ಎನ್ಐಎ ಉಗ್ರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಮುಂಬೈಯಲ್ಲಿರುವ ಅವರ ನಿವಾಸಕ್ಕೆ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೋಮುವಾದ ಮತ್ತು ಭಯೋತ್ಪಾದನೆ ಪ್ರಚೋದಕ ಭಾಷಣಗಳನ್ನು ಪ್ರಸ್ತುತ ಪಡಿಸಿರುವ ಆರೋಪದಡಿ ರಾಷ್ಟ್ರೀಯ ತನಿಖಾ ಸಂಸ್ಥೆ ಈಗಾಗಲೇ ಜಾಕಿರ್‌ ನಾಯಕ್‌ ವಿರುದ್ಧ ಕಳೆದ ನವೆಂಬರ್ ನಲ್ಲಿ ಪ್ರಕರಣ ದಾಖಲಿಸಿದ್ದು, ವಿದೇಶದಲ್ಲಿರುವ ಜಾಕಿರ್‌ ನಾಯಕ್‌ ನನ್ನು ವಿಚಾರಣೆಗೆ ಒಳಪಡಿಸಲು ಯತ್ನಿಸುತ್ತಿದೆ.
ನಾಯಕ್‌ ಒಡೆತನದ ಇಸ್ಲಾಮಿಕ್‌ ರಿಸರ್ಚ್‌ ಫೌಂಡೇಷನ್‌ (ಐಆರ್‌ಎಫ್‌) ಸಂಸ್ಥೆಯನ್ನು ಕಾನೂನುಬಾಹಿರ ಚಟುವಟಿಕೆ ಕಾಯ್ದೆ ಅಡಿ ಕೇಂದ್ರ ಸರ್ಕಾರ ನಿಷೇಧ ಹೇರಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com