ಉಗ್ರ ಪ್ರಕರಣ ಹೊರತುಪಡಿಸಿ ಇತರರಿಗೆ ಗಲ್ಲು ಶಿಕ್ಷೆ ಕೈಬಿಡುವಂತೆ ಕಾನೂನು ಆಯೋಗ ಶಿಫಾರಸು

ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣಗಳನ್ನು ಹೊರತುಪಡಿಸಿ ಇತರೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಯನ್ನು ಕೈಬಿಡುವಂತೆ ಕಾನೂನು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣಗಳನ್ನು ಹೊರತುಪಡಿಸಿ ಇತರೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಯನ್ನು ಕೈಬಿಡುವಂತೆ ಕಾನೂನು ಆಯೋಗ ಶಿಫಾರಸು ಮಾಡಿರುವುದಾಗಿ ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಗೆ ತಿಳಿಸಿದೆ.
ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣಗಳನ್ನು ಹೊರತುಪಡಿಸಿ ಇತರೆ ಎಲ್ಲಾ ರೀತಿಯ ಅಪರಾಧ ಪ್ರಕರಣಗಳಲ್ಲೂ ಗಲ್ಲು ಶಿಕ್ಷೆಯನ್ನು ಕೈಬಿಡಬೇಕು ಎಂದು ಕಾನೂನು ಆಯೋಗ ತನ್ನ 262ನೇ ವರದಿಯಲ್ಲಿ ಶಿಫಾರಸು ಮಾಡಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಹನ್ಸರಾಜ್ ಅಹಿರ್ ಅವರು ಇಂದು ರಾಜ್ಯಸಭೆಗೆ ತಿಳಿಸಿದ್ದಾರೆ.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಕ್ರಿಮಿನಲ್ ಕಾನೂನು ಅಪರಾಧ ಪ್ರಕ್ರಿಯೆ ಸಂವಿಧಾನದ 7ನೇ ವಿಧಿಯ ಸಮವರ್ತಿ ಪಟ್ಟಿಯಲ್ಲಿ ಬರುವುದರಿಂದ, ಕಾನೂನು ಆಯೋಗದ ಈ ಶಿಫಾರಿಸಿನ ಬಗ್ಗೆ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಅಭಿಪ್ರಾಯ ಪಡೆಯಲಾಗುವುದು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com