ಪ್ರತಿಭಟನೆ ಹಿಂಪಡೆದು ಕೆಲಸಕ್ಕೆ ಹಾಜರಾಗುವಂತೆ ವೈದ್ಯರಿಗೆ ಹೈಕೋರ್ಟ್, ಮಹಾ ಸಿಎಂ ಸೂಚನೆ

ಮಹಾರಾಷ್ಟ್ರದಲ್ಲಿ ವೈದ್ಯರಿಗೆ ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ರಾಜ್ಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ....
ದೇವೇಂದ್ರ ಫಡ್ನವಿಸ್
ದೇವೇಂದ್ರ ಫಡ್ನವಿಸ್
Updated on: 
ಮುಂಬೈ: ಮಹಾರಾಷ್ಟ್ರದಲ್ಲಿ ವೈದ್ಯರಿಗೆ ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ರಾಜ್ಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಸರ್ಕಾರಿ ವೈದ್ಯರಿಗೆ ತಕ್ಷಣ ಪ್ರತಿಭಟನೆ ಹಿಂಪಡೆದು ಕೆಲಸಕ್ಕೆ ಹಾಜರಾಗುವಂತೆ ಬಾಂಬೆ ಹೈಕೋರ್ಟ್ ಆದೇಶಿಸಿದೆ. ಅಲ್ಲದೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಹ ಸೂಕ್ತ ರಕ್ಷಣೆಯ ಭರವಸೆ ನೀಡಿ, ಕೂಡಲೇ ಕೆಲಸಕ್ಕೆ ಹಾಜರಾಗುವಂತೆ ಮನವಿ ಮಾಡಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಸಹ ರಾಜ್ಯದ ವೈದ್ಯರಿಗೆ ಸೂಕ್ತ ಭದ್ರತೆ ಕಲ್ಪಿಸಲು ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ.
ಹೈಕೋರ್ಟ್ ಆದೇಶ ಹಾಗೂ ಮುಖ್ಯಮಂತ್ರಿಯ ಭರವಸೆಯ ನಂತರ ಪ್ರತಿಭಟನಾನಿರತ ವೈದ್ಯರು ಪ್ರತಿಭಟನೆ ಹಿಂಪಡೆಯುವ ಬಗ್ಗೆ ಚರ್ಚಿಸುತ್ತಿದ್ದು, ಶೀಘ್ರದಲ್ಲೇ ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ಭಾರತೀಯ ವೈದ್ಯಕೀಯ ಸಂಘದ ಯುವ ಘಟಕದ ಅಧ್ಯಕ್ಷ ಡಾ.ಸಾಗರ್ ಮುಂದಾಡ ಅವರು ಹೇಳಿದ್ದಾರೆ.
ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಯ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆ ನಡೆಸುತ್ತಿದ್ದು, ವೈದ್ಯರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿ ಕಳೆದ ಸೋಮವಾರದಿಂದ ಸುಮಾರು 4 ಸಾವಿರ ವೈದ್ಯರು ರಾಜ್ಯದ್ಯಂತ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದಾಗಿ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com