ಪೊಲೀಸ್ ಠಾಣೆಗೆ ಯೋಗಿ ಆದಿತ್ಯನಾಥ್ ದಿಢೀರ್ ಭೇಟಿ, ಪರಿಶೀಲನೆ

ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕಾರ್ಯದಲ್ಲಿ ಯೋಗಿ ಆದಿತ್ಯನಾಥ್ ನಿರತರಾಗಿದ್ದು, ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿ
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕಾರ್ಯದಲ್ಲಿ ಯೋಗಿ ಆದಿತ್ಯನಾಥ್ ನಿರತರಾಗಿದ್ದು, ಮಾ.23 ರಂದು ಹಜರತ್ ಗಂಜ್ ಪೊಲೀಸ್ ಠಾಣೆಗೆ ದಿಢೀರ್  ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 
ಗೃಹ ಖಾತೆಯನ್ನೂ ತಮ್ಮಲ್ಲಿಯೇ ಇರಿಸಿಕೊಂಡಿರುವ ಯೋಗಿ ಆದಿತ್ಯನಾಥ್, ಪೊಲೀಸ್ ಠಾಣೆಯಲ್ಲಿನ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮರುಸ್ಥಾಪನೆ ಮಾಡಲಾಗುವುದು ಎಂದು ಹೇಳಿದ್ದಾರೆ. ಪೊಲೀಸ್ ಅಧಿಕಾರಿಗಳ ಕಾರ್ಯಕ್ಷಮತೆ ಹಾಗೂ ಸಿದ್ಧತೆಯನ್ನು ಪರಿಶೀಲನೆ ನಡೆಸಲು ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿರುವುದಾಗಿ ಯೋಗಿ ಆದಿತ್ಯನಾಥ್ ಮಾಹಿತಿ ನೀಡಿದ್ದು, ಕಾನೂನು ಸುವ್ಯಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಗಿರಿಸಲು ಯಾವ ಕ್ರಮಗಳನ್ನು ಕೈಗೊಳ್ಳಬೇಕೆಂಬುದರ ಬಗ್ಗೆ ನಿರ್ಧರಿಸುವುದಾಗಿ ತಿಳಿಸಿದ್ದಾರೆ. 
ಕಾನೂನು ಸುವ್ಯವಸ್ಥೆ ಜಾರಿಗೊಳಿಸಲು ಅಗತ್ಯವಿರುವ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಹಿಂಜರಿಯುವುದಿಲ್ಲ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಇದೇ ವೇಳೆ ಸೈಬರ್ ಕ್ರೈಂ ಬ್ರಾಂಚ್ ಗೂ ಯೋಗಿ ಆದಿತ್ಯನಾಥ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com