ಜಾರ್ಖಂಡ್: ಗುಂಪು ಘರ್ಷಣೆ- ಮೂವರು ನಕ್ಸಲರ ಸಾವು

ಜಾರ್ಖಂಡ್ ನ ಪಲಮೌ ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿದ್ದು, ಘರ್ಷಣೆ ವೇಳೆ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆಂದು ಪೊಲೀಸರು ಶುಕ್ರವಾರ ಹೇಳಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ರಾಂಚಿ: ಜಾರ್ಖಂಡ್ ನ ಪಲಮೌ ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿದ್ದು, ಘರ್ಷಣೆ ವೇಳೆ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆಂದು ಪೊಲೀಸರು ಶುಕ್ರವಾರ ಹೇಳಿದ್ದಾರೆ. 
ಮೊಹಮ್ಮದ್ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಸಿತಾಚುವಾ ಗ್ರಾಮದ ಬಳಿ ಎರಡು ನಕ್ಸಲರ ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿದೆ. ಈ ವೇಳೆ ನಕ್ಸಲು ಗುಂಡಿನ ದಾಳಿ ನಡೆಸಿದ್ದು, ಮೂವರು ನಕ್ಸಲರು ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. 
ಮೂವರ ಪೈಕಿ ಹತ್ಯೆಯಾದ ಓರ್ವ ನಕ್ಸಲನನ್ನು ಅಜಯ್ ಯಾದವ್ ಎಂದು ಗುರ್ತಿಸಲಾಗಿದೆ. ಕೆಲ ದಿನಗಳ ಹಿಂದಷ್ಟೇ ಪೊಲೀಸರು ಈತನನ್ನು ಹುಡುಕಿಕೊಟ್ಟವರಿಗೆ ರೂ.10 ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದರು. 
ಘಟನೆಯವೇಲೆ ಓರ್ವ ನಕ್ಸಲನಿಗೆ ಗಾಯವಾಗಿದ್ದು. ಈತನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತನಿಂದ 1 ಎಕೆ-47 ಸೇರಿದಂತೆ 7 ರೈಫಲ್ಸ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com