ವೈದ್ಯಕೀಯ ಸಂಸ್ಥೆಗಳಲ್ಲಿ ಹೆಚ್ಚುವರಿ 5,000 ಪಿಜಿ ಸೀಟ್ ಸೃಷ್ಟಿ: ಕೇಂದ್ರ ಸರ್ಕಾರ

ದೇಶದ ವೈದ್ಯಕೀಯ ಸಂಸ್ಥೆಗಳಲ್ಲಿ ಹೆಚ್ಚುವರಿಯಾಗಿ 5 ಸಾವಿರ ಸ್ನಾತಕೋತ್ತರ ಪದವಿ ಸೀಟ್ ಗಳನ್ನು ಸೃಷ್ಟಿಸಲಾಗಿದೆ ಮತ್ತು ಆರೋಗ್ಯ ಕ್ಷೇತ್ರಕ್ಕೆ....
ಜೆಪಿ ನಡ್ಡಾ
ಜೆಪಿ ನಡ್ಡಾ
ನವದೆಹಲಿ: ದೇಶದ ವೈದ್ಯಕೀಯ ಸಂಸ್ಥೆಗಳಲ್ಲಿ ಹೆಚ್ಚುವರಿಯಾಗಿ 5 ಸಾವಿರ ಸ್ನಾತಕೋತ್ತರ ಪದವಿ ಸೀಟ್ ಗಳನ್ನು ಸೃಷ್ಟಿಸಲಾಗಿದೆ ಮತ್ತು ಆರೋಗ್ಯ ಕ್ಷೇತ್ರಕ್ಕೆ ಈ ಸಾಲಿನ ಬಜೆಟ್ ಶೇ.28ರಷ್ಟು ಅನುದಾನ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಗೆ ತಿಳಿಸಿದೆ.
ಇಂದು ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರು, ವೈದ್ಯಕೀಯ ಸಂಸ್ಥೆಗಳಲ್ಲಿ 5 ಸಾವಿರ ಪಿಜಿ ಸೀಟ್ ಗಳ ಹೆಚ್ಚಳ ಸೇರಿದಂತೆ ಆರೋಗ್ಯ ಕ್ಷೇತ್ರದ ಸುಧಾರಣೆಗೆ ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಂಡಿದೆ ಎಂದರು.
ಆರೋಗ್ಯ ಕ್ಷೇತ್ರದಲ್ಲಿನ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಮತ್ತು ವೈದ್ಯಕೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ರಾಜ್ಯಗಳಿಗೆ ಹಣಕಾಸಿನ ಸಹಾಯ ನೀಡುತ್ತದೆ. ಆದರೆ ರಾಜ್ಯಗಳು ಕೇಂದ್ರ ನೀಡಿದ ಹಣವನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು ಮತ್ತು ಬಳಕೆ ಮಾಡಿದ್ದರ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ನಡ್ಡಾ ಪ್ರಶ್ನೋತ್ತರ ಅವಧಿಯಲ್ಲಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರಗಳು ಗ್ರಾಮೀಣ ಭಾಗದಲ್ಲಿ ಅಗತ್ಯವಿರುವಷ್ಟು ವೈದ್ಯರನ್ನು ನೇಮಕ ಮಾಡಲು ಕ್ರಮ ತೆಗೆದುಕೊಳ್ಳಬೇಕು. ಇದಕ್ಕಾಗಿ ಕೇಂದ್ರ ಸರ್ಕಾರ ಹಣಕಾಸಿನ ನೆರವು ನೀಡಲಿದೆ ಎಂದು ಸಚಿವರು ಹೇಳಿದ್ದಾರೆ.
ಮತ್ತೊಂದು ಪ್ರಶ್ನೆಗೆ ಪ್ರತಿಕ್ರಿಯಿಸಿದ ನಡ್ಡಾ, ಕೇಂದ್ರ ಸರ್ಕಾರದ ಆಸ್ಪತ್ರೆಗಳಲ್ಲಿ ಶಸ್ತ್ರ ಚಿಕಿತ್ಸೆ ಮಾಡುವುದಕ್ಕೆ ಸಂಬಂಧಸಿದಂತೆ ಯಾವುದೇ ಸಂಪ್ರದಾಯ ಅಥವಾ ರೂಢಿ ಇಲ್ಲ. ತುರ್ತು ಪ್ರಕರಣಗಳಿದ್ದರೆ ತಕ್ಷಣ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿದೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com