20 ದಶಕಗಳ ಕಾಲ ನಂಜನಗೂಡಿನಲ್ಲಿ ಜೆಡಿಎಸ್ ಗೆ ಕೇಶವ್ ಮೂರ್ತಿಯವರು ಆಧಾರ ಸ್ತಂಭವಾಗಿದ್ದರು. 2013ರ ವಿಧಾನಸಭಾ ಚುನಾವಣೆಯಲ್ಲಿ 41,000 ಮತಗಳನ್ನು ಪಡೆದುಕೊಂಡಿದ್ದರು. 2014ರ ಚುನಾವಣೆಯಲ್ಲಿ ಜೆಡಿಎಸ್ ಕೇವಲ 7,333 ಮತಗಳನ್ನು ಪಡೆಯುವಲ್ಲಿ ಮಾತ್ರ ಸಫಲವಾಗಿತ್ತು. ಕೇಶವ್ ಮೂರ್ತಿಯವರು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿರುವುದರಿಂದ ಜೆಡಿಎಸ್ ಗೆ ದೊಡ್ಡ ಹೊಡೆತವೇ ಬಿದ್ದಂತಾಗಿದೆ. ಹೀಗಾಗಿ ಸಮಯವನ್ನು ವ್ಯರ್ಥ ಮಾಡದೆ ಜೆಡಿಎಸ್ ಉಪ ಚುನಾವಣೆಯಿಂದಲೇ ದೂರ ಉಳಿದು, ಮುಂದಿನ ವಿಧಾನಸಭಾ ಚುನಾವಣೆ 2018ರತ್ತ ಗಮನ ಹರಿಸಲು ನಿರ್ಧರಿಸಿದೆ ಎಂಬ ಮಾತುಗಳು ಕೇಳಿಬರತೊಡಗಿದೆ.